ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್‍ನ್ನು ಪುರಸಭಾ ಸದಸ್ಯರಾದ ಪ್ರಶಾಂತ ನಾಯ್ಕ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಕಾರಣವಾಗಬೇಕೆಂದು ಕರೆನೀಡಿದರು.
ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಚಾರ್ಯ ಡಿ.ಎಸ್.ಭಟ್ಟ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದಿಂದ ಸಾಧನೆ ಮಾಡಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಹಲವು ಉದಾಹರಣೆಗಳ ಮೂಲಕ ತಿಳಿಹೇಳಿದರು. ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ಹೊಸ ನೇತಾರರಾಗುವ ಗುಣವನ್ನು ಹೇಗೆ ಬೆಳೆಸುತ್ತದೆ ಎಂಬುದನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿಗಳಾದ ಡಿ.ಡಿ.ಕಾಮತ ಮಾತನಾಡಿ, ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ, ಸೋಲು-ಗೆಲುವು ಎಲ್ಲವನ್ನೂ ಎದುರಿಸುವ ಶಕ್ತಿಯನ್ನು ಈಗಿಂದಲೇ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಶಾಲಾ ಸಂಸತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಅನಿರುದ್ಧ ಭಟ್ಟಕೆರೆ ಹಾಗೂ ಸುದಿತಿ ಕಾಮತ್ ಮಾತನಾಡಿದರು.
ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣ ಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಜಯರಾಜ ಶೇರುಗಾರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ಪ್ರಕಾಶ ಗಾವಡಿ ನಿರೂಪಿಸಿದರು. ಶಿಕ್ಷಕಿ ಸುನೀತಾ ನಾಯ್ಕ ವಂದಿಸಿದರು. ತೇಜಸ್ವಿನಿ ಸಂಗಡಿಗರು ಪ್ರಾರ್ಥಿಸಿದರು.