ಬೆಂಗಳೂರು : ಬಜೆಟ್ ಮಂಡನೆಯ ಬೆನ್ನಲ್ಲೇ ಬಜೆಟ್ ಕುರಿತಾದ ಟೀಕೆ ಟಿಪ್ಪಣಿಗಳು ಪ್ರಾರಂಭವಾಗಿದೆ.

ನಿನ್ನೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ, ಎಂದು ಈ ಮೂರೂ ಕರಾವಳಿ ಜಿಲ್ಲೆಯ ಶಾಸಕರೆಲ್ಲ ಸೇರಿ ಇಂದು ವಿಧಾನಸೌಧದ ಮುಂದೆ ಗಾಂಧೀ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

RELATED ARTICLES  ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ 100 ಕೋಟಿ ರೂ.ಗೂ ಹೆಚ್ಚಿನ ಹಣ ಪಡೆದಿದ್ದಾನೆ

ವಿಧಾನಸೌಧದ ಮುಂದೆ ಇರುವ ಗಾಂಧಿ ಪ್ರತಿಮೆಯ ಎದುರು ನಡೆದ ಈ ಪ್ರತಿಭಟನೆ ಕೈಗೊಂಡು ಬಜೆಟ್ ನಲ್ಲಿ ಕರಾವಳಿ ಭಾಗವನ್ನು ನಿರ್ಲಕ್ಷಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರಾವಳಿಯ ಶಾಸಕರಾದ ರೂಪಾಲಿ ನಾಯ್ಕ, ಸುನೀಲ್ ನಾಯ್ಕ, ದಿನಕರ ಶೆಟ್ಟಿ, ಸುನೀಲ್ ಕುಮಾರ್, ಹರೀಶ್ ಪೂಂಜ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಶ್ರೀನಿವಾಸ್ ಪೂಜಾರಿ, ಸುಕುಮಾರ್ ಶೆಟ್ಟಿ ಇನ್ನಿತರ ಶಾಸಕರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

RELATED ARTICLES  ಕಡಲತೀರಗಳಲ್ಲಿ ಪ್ರವಾಸಿಗರ ಮೇಲೆ ನಿಗಾ ಇಡಲು ಡ್ರೋಣ್ ಕಣ್ಗಾವಲು

ಕಳೆದ ರಾಜ್ಯ ವಿಧಾನಸಭೆಯಲ್ಲಿ ಕರಾವಳಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬದಲು ಕೇವಲ ಬಿಜೆಪಿಗೆ ಜನರ ಮನ್ನಣೆ ಹೆಚ್ಚು ಸಿಕ್ಕಿದ್ದುದರಿಂದ, ಕರಾವಳಿ ಜಿಲ್ಲೆಯ ಕುರಿತು ಸಮ್ಮಿಶ್ರ ಸರ್ಕಾರ ತೀವ್ರ ನಿರ್ಲಕ್ಷ ದೋರಣೆ ಅನುಸರಿಸುತ್ತಿದೆ, ಎಂದು ಆರೋಪಗಳು ಕೇಳಿಬರುತ್ತಿದೆ. ಆ ಹಿನ್ನೆಲೆಯಲ್ಲಿ ಇಂದಿನ ಧರಣಿ ವಿಶೇಷ ಎನಿಸಿದೆ.