ಕುಮಟಾ ತಾಲೂಕಿನ ಹೊಲನಗದ್ದೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗ್ನಿಶಾಮಕ ದಳದವರಿಂದ ಪ್ರಾತ್ಯಕ್ಷಿಕೆ ಹಾಗೂ ಜನಜಾಗೃತಿ ಸಭೆ ನಡೆಯಿತು. ಅಗ್ನಿ ಅವಘಡ ಹಾಗೂ ಇತರೆ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳುವಳಿಕೆ ನೀಡಲಾಯಿತು. ವಿದ್ಯಾರ್ಥಿಗಳು ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಗಳನ್ನು ನೀಡಲಾಯಿತು. ನಂತರ ನಡೆದ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸಿದರು. ಕುಮಟಾ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು, ಶಾಲಾ ಮುಖ್ಯಾಧ್ಯಾಪಕರಾದ ಗಣಪತಿ, ಡಿ,ನಾಯ್ಕ, ಶಿಕ್ಷಕರಾದ ರವೀಂದ್ರ ಭಟ್ಟ ಸೂರಿ, ವೀಣಾ ನಾಯ್ಕ, ಮಂಗಲಾ ನಾಯ್ಕ, ಶ್ಯಾಮಲಾ ಎಂ ಪಟಗಾರ್. ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES  ಜಿ.ಪಂ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ ಶೃದ್ಧಾಂಜಲಿ ಸಭೆ : ಕಾರ್ಯದ ಸ್ಮರಣೆ.