ಗುರುರ್ಬ್ರಹ್ಮ, ಗುರುರ್ವಿಷ್ಣು, ಗುರುರ್ದೇವೋ ಮಹೇಶ್ವರಾ । ಗುರು ಸಾಕ್ಷಾತ್ ಪರಬ್ರಹ್ಮ । ತಸ್ಮೈ ಶ್ರೀ ಗುರವೇ ನಮಃ

ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳುಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ. ಗುರು ಅನ್ನುವ ಶಬ್ದ ಗು ಮತ್ತು ರು ಅನ್ನುವ ಮೂಲ ಪದಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಗು ಅಂದರೆ ಅಂಧಕಾರ ಅಥವಾ ಅಜ್ಞಾನ. ರು ಅಂದರೆ ಕಳೆಯುವ ಅಥವಾ ದೂರ ಮಾಡುವ ಎಂದರ್ಥ. ಅದಕ್ಕೆ ಗುರು ಅಂದರೆ ಅಂಧಕಾರ ಅಥವಾ ಅಜ್ಞಾನವನ್ನು ದೂರ ಮಾಡುವವರು ಎಂದರ್ಥ. ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುತ್ತಾರೆ.

ಗುರುಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ.

ಈ ದಿನ ಶೈಕ್ಷಣಿಕ ವೃಂದದವರು ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಮತ್ತು ತಮ್ಮ ಭಾವಿ ಶಿಕ್ಷಕರನ್ನು ಮತ್ತು ವಿದ್ವಾಂಸರನ್ನು ಸ್ಮರಿಸುವ ಮೂಲಕ ಆಚರಿಸುತ್ತಾರೆ.

ಬೌದ್ಧರು ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಗೌತಮ ಬುದ್ಧನ ಪ್ರಥಮ ಧರ್ಮೋಪದೇಶದ ಅಂಗವಾಗಿ ಆಚರಿಸುತ್ತಾರೆ. ಈ ದಿನ ಗೌತಮ ಬುದ್ಧನು ಉತ್ತರ ಪ್ರದೇಶದ ಸಾರನಾಥದಲ್ಲಿ ತನ್ನ ಪ್ರಥಮ ಧರ್ಮೋಪದೇಶ ನೀಡಿದ. ಯೋಗಸಂಪ್ರದಾಯದಲ್ಲಿ ಈ ದಿನವನ್ನು ಶಿವನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಧಾರೆಯೆರೆದು ಪ್ರಥಮ ಗುರು ಆದ ದಿನ ಎಂಬ ನಂಬಿಕೆಯಿಂದ ಆಚರಿಸುತ್ತಾರೆ. ಹಲವಾರು ಹಿಂದೂಗಳು, ಹಿಂದೂ ಪರಂಪರೆಯ ಶ್ರೇಷ್ಠ ಗುರುಗಳಲ್ಲಿ ಒಬ್ಬರಾದ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಅಂಗವಾಗಿ ಈ ಹಬ್ಬವನ್ನು ಆಚರಿಸುತ್ತಾರೆ. ವೇದವ್ಯಾಸ ಮಹರ್ಷಿಗಳು ಈ ದಿನ ಹುಟ್ಟಿದ್ದಲ್ಲದೇ ಆಷಾಢ ಶುಕ್ಲ ಪಕ್ಷದ ಪ್ರಾರಂಭದಿಂದ ಬ್ರಹ್ಮಸೂತ್ರಗಳ ರಚನೆ ಪ್ರಾರಂಭಿಸಿದರು. ಈ ದಿನ ಆ ಶುಕ್ಲ ಪಕ್ಷ ಕೊನೆಗೊಳ್ಳುತ್ತದೆ. ಇದರ ಸ್ಮರಣಾರ್ಥಕವಾಗಿ ಈ ದಿನದಂದು ಬ್ರಹ್ಮಸೂತ್ರಗಳ ಪಠಣ ಮಾಡಲಾಗುತ್ತದೆ ಹಾಗೂ ಈ ದಿನವನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ. ಹಿಂದೂ ಧರ್ಮದ ಎಲ್ಲ ಅಧ್ಯಾತ್ಮಿಕ ಪರಂಪರೆಗಳಲ್ಲಿಯೂ ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುತ್ತ ಈ ಹಬ್ಬವನ್ನು ಅತ್ಯಂತ ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತದೆ. ಮಳೆಗಾಲದ ನಾಲ್ಕು ತಿಂಗಳುಗಳಾದ ಚಾತುರ್ಮಾಸದಲ್ಲಿ ಬರುವ ಈ ಗುರುಪುರ್ಣಿಮೆಯಂದು ಸನ್ಯಾಸಿಗಳು ತಮ್ಮ ಗುರುಗಳಿಗೆ ಪೂಜೆ ಸಲ್ಲಿಸುತ್ತಾರೆ. ಈ ಚಾತುರ್ಮಾಸದಲ್ಲಿ ಸನ್ಯಾಸಿಗಳು ಸಾಮಾನ್ಯವಾಗಿ ಒಂದೇ ಸ್ಥಳದಲ್ಲಿ ಇದ್ದು, ಭಕ್ತಾದಿಗಳಿಗೆ ಪ್ರವಚನಗಳನ್ನು ನೀಡುತ್ತಾರೆ. ಭಾರತ ಶಾಸ್ತ್ರೀಯ ಸಂಗೀತವು ಗುರು ಶಿಷ್ಯ ಪರಂಪರೆ ಪಾಲಿಸುವುದರಿಂದ, ವಿಶ್ವಾದ್ಯಂತ ಅದರ ವಿದ್ಯಾರ್ಥಿಗಳು ಈ ಹಬ್ಬವನ್ನು ಆಚರಿಸುತ್ತಾರೆ.

RELATED ARTICLES  . ಸನ್ಮಾರ್ಗವೇ ಜೀವನದ ಹರುಷ ಲೇಖನ ಮಾಲಿಕೆ -

ಭಾರತ ಶೈಕ್ಷಣಿಕ ವೃಂದದಲ್ಲಿ ಅಚರಣೆ

ಭಾರತ ಶೈಕ್ಷಣಿಕ ವೃಂದದಲ್ಲಿ ಈ ಹಬ್ಬವನ್ನು ಧರ್ಮಾತೀತವಾಗಿ ಆಚರಿಸಲಾಗುತ್ತದೆ. ಹಲವಾರು ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಆಯೋಜಿತವಾದ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತಾರೆ ಮತ್ತು ಹಿಂದಿನ ವಿದ್ವಾಂಸರನ್ನು ನೆನೆಸುತ್ತಾರೆ. ವಿದ್ಯಾ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಭೇಟಿ ಆಗಿ ಅವರಿಗೆ ಕಾಣಿಕೆಗಳನ್ನು ಅರ್ಪಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸುತ್ತಾರೆ.

RELATED ARTICLES  ಅಮ್ಮ,.... ಎಲ್ಲಿ ನನ್ನ ಅಪ್ಪ?

ಹಿಂದೂ ಪುರಾಣ

ಇದೇ ದಿನ ಮಹಾಭಾರತದ ಕರ್ತೃರಾದ ವೇದವ್ಯಾಸರು, ಪರಾಶರ ಋಷಿಗಳು ಹಾಗೂ ಒಬ್ಬ ಮೀನುಗಾರನ ಮಗಳಾದ ಸತ್ಯವತಿಗೆಜನ್ಮಿಸಿದರು.ವೇದವ್ಯಾಸರು ತಮ್ಮ ಕಾಲದಲ್ಲಿ ಅಸ್ತಿತ್ವದಲ್ಲಿದ್ದ ಎಲ್ಲ ವೈದಿಕ ಋಕ್ಕುಗಳನ್ನು ಸಂಗ್ರಹಿಸಿ, ಯಜ್ಞ ಯಾಗಾದಿ ಧಾರ್ಮಿಕ ವಿಧಿಗಳಲ್ಲಿ ಅವುಗಳ ಬಳಕೆಯೆ ಆಧಾರದ ಮೇಲೆ ರಿಗ್ವೇದ, ಯಜುರ್ವೇದ, ಸಾಮವೇದ ಮತ್ತು ಅಥರ್ವವೇದ ಎಂಬ ನಾಲ್ಕು ಭಾಗಗಳನ್ನಾಗಿ ವಿಭಾಗಿಸಿ, ಅವುಗಳನ್ನು ತಮ್ಮ ನಾಲ್ಕು ಮುಖ್ಯ ಶಿಷ್ಯರಾದ ಸುಮಂತು, ವೈಷಂಪಾಯನ, ಜೈಮಿನಿ ಹಾಗೂ ಪೈಲರಿಗೆ ಬೋಧಿಸುವ ಮೂಲಕ ವೈದಿಕ ಅಧ್ಯಯನಗಳ ಉದ್ದೇಶಕ್ಕಾಗಿ ಮಹತ್ತರವಾದ ಸೇವೆಮಾಡಿದರು. ಈ ವಿಭಜನೆ ಮತ್ತು ಸಂಪಾದನೆಯನ್ನು ಮಾಡಿದ್ದಕ್ಕಾಗಿ ಅವರಿಗೆ ವ್ಯಾಸ (ವ್ಯಾಸ = ಸಂಪಾದಿಸು, ವಿಭಾಗಿಸು) ಎಂಬ ಗೌರವ ನಾಮ ದೊರೆಯಿತು.