ಗೋಕರ್ಣ: ಪ ಪೂ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ , ಜೈನಾಪುರ ಮಹಾಸಂಸ್ಥಾನ ಮಠ, ಬಸವನಬಾಗೇವಾಡಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 557ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

RELATED ARTICLES  ಮನೆಯ ಬೀಗ ಮುರಿದು ಲಕ್ಷಾಂತರ ರೂ ಎಗರಿಸಿದ ಕಳ್ಳರು.

ಶ್ರೀ ದೇವಾಲಯದ ಪರವಾಗಿ ಕೋಟೇಶ್ವರದ ಪುರೋಹಿತರಾದ ಶ್ರೀ ನಾಗರಾಜ ನಾವಡ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು .ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಭಾಷೆಯು ವಿದ್ಯಾರ್ಥಿಗಳಲ್ಲಿ ಉತ್ಸಾಹ ಪ್ರೇರಣೆ ಹಾಗೂ ಅಭಿರುಚಿಗಳನ್ನು ಮೂಡಿಸುವಂತಿರಬೇಕು:ನೀರಜಾ ನಾಯಕ