ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಮೃತದೇಹದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಮಣಿಪಾಲ ಆಸ್ಪತ್ರೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. ವಿಷದ ಪ್ರಮಾಣ ಎಷ್ಟರ ಮಟ್ಟಿಗೆ ಇದ್ದಿತು ಎಂಬ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಆಸ್ಪತ್ರೆಯ ಈ ಪ್ರಕಟಣೆ ಹೊರಬಿದ್ದ ನಂತರ ಪೊಲೀಸರ ತನಿಖೆಗೆ ಉಲ್ಲೇಖಿಸುವ ಸಾಧ್ಯತೆಯಿದೆ.
ಶಿರೂರು ಶ್ರೀಗಳ ಹಠಾತ್ ನಿಧನ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು, ಅವರ ಭಕ್ತರ ಒತ್ತಾಯದ ಮೇರೆಗೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಹಸ್ತಾಂತರಿಸಿದ್ದರು.

RELATED ARTICLES  ಬೆಂಗಳೂರು : ಫುಡ್ ​​ಪಾಯ್ಸನ್​ನಿಂದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.

ಸ್ವಾಮೀಜಿಗಳನ್ನು ನಮ್ಮ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅವರ ಆರೋಗ್ಯ ತುಂಬಾ ಹದಗೆಟ್ಟಿತ್ತು. ನಮ್ಮ ವೈದ್ಯರ ತಂಡವೆಲ್ಲರೂ ಸೇರಿ ಚಿಕಿತ್ಸೆ ಕೊಟ್ಟಿದ್ದೆವು. ಆದರೆ ಬಹು ಅಂಗಾಗ ವೈಫಲ್ಯದಿಂದ ಅವರು ಮೃತಪಟ್ಟಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದ ನಂತರ ಹೊಟ್ಟೆಯಲ್ಲಿ ವಿಷಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೊಟ್ಟೆಯೊಳಗೆ ತೀವ್ರ ರಕ್ತಸ್ರಾವವಾಗಿತ್ತು. ನಮ್ಮ ಸಂಶಯವನ್ನ ಪೊಲೀಸರಿಗೆ ತಿಳಿಸಿದ್ದೇವೆ. ಮುಂದಿನ ಕ್ರಮ ಪೊಲೀಸರು ಕೈಗೊಳ್ಳುತ್ತಾರೆ. ಕೆಎಂಸಿ. ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ಕೆಎಂಸಿ ಆಸ್ಪತ್ರೆಯಲ್ಲಿ ವೈದ್ಯರು ತಿಳಿಸಿದ್ದಾರೆ.

RELATED ARTICLES  2018 ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನ: ನೀರಜ್ ಚೋಪ್ರಾ ಸಾಧನೆ.

ಶ್ರೀಗಳು ಸೇವಿಸಿದ ಆಹಾರದಲ್ಲಿ ವಿಷಪ್ರಾಶನವಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಹಲವಾರು ಅನುಮಾನಗಳು ಎದ್ದಿವೆ. ಮೊನ್ನೆ ಜುಲೈ 16ರಂದು ಶಿರೂರು ಮೂಲಮಠದಲ್ಲಿ ವನಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಕಾರ್ಯಕ್ರಮಲ್ಲಿ ಆಹಾರ ಸೇವಿಸಿದ ಬಳಿಕ ಶ್ರೀಗಳು ಸ್ವಲ್ಪ ಹೊತ್ತಿನಲ್ಲಿ ತೀವ್ರ ಅಸ್ವಸ್ಥಕ್ಕೀಡಾಗಿದ್ದರು.ಅಂದೇ ಅವರನ್ನು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆರೋಗ್ಯದಲ್ಲಿ ಸುಧಾರಣೆ ಕಂಡುಬರದ ಕಾರಣ ಕಳೆದ ಮಂಗಳವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಅಸೌಖ್ಯಕ್ಕೀಡಾಗಿದ್ದ ಶ್ರೀಗಳಿಗೆ ವೈದ್ಯರು ನೀಡಿದ ಚಿಕಿತ್ಸೆ ಯಾವುದೇ ಫಲ ನೀಡಲಿಲ್ಲ.

ಮಾಹಿತಿ: ಕನ್ನಡ ಪ್ರಭಾ