ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 100 ರೂ. ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರದಲ್ಲೇ ಚಲಾವಣೆಗೆ ತರಲು ಯೋಜನೆ ರೂಪಿಸಿದ್ದು, ಅದರ ವಿನ್ಯಾಸವನ್ನು ಬಿಡುಗಡೆ ಮಾಡಿದೆ.
2016ರ ನವೆಂಬರ್ನಲ್ಲಿ ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣ ನಿರ್ಧಾರವನ್ನು ಆರ್ಬಿಐ ಹೊಸ ವಿನ್ಯಾಸದ ನೋಟುಗಳನ್ನು ಬಿಡುಗಡೆ ಮಾಡಿತ್ತು. ಈಗಾಗಲೇ 2000 ರೂ., 500 ರೂ., 10 ರೂ., 50 ರೂ.ನ ಹೊಸ ವಿನ್ಯಾಸದ ನೋಟುಗಳನ್ನು ಬಿಡುಗಡೆ ಮಾಡಿದೆ.
ಪ್ರಸ್ತುತ 100 ರೂ. ನ ಹೊಸ ನೋಟು ಲ್ಯಾವೆಂಡರ್ ಬಣ್ಣ ಹೊಂದಿದ್ದು, 66 ಮಿ.ಮೀ.X 142ಮಿ.ಮೀ. ಅಳತೆಯಲ್ಲಿದೆ. ನೋಟಿನ ಹಿಂಭಾಗದಲ್ಲಿ ಗುಜರಾತ್ನ ಐತಿಹಾಸಿಕ ‘ರಾಣಿ ಕಿ ವಾವ್’ನ ಚಿತ್ರ ಹೊಂದಿದೆ.
ಈಗಾಗಲೇ ಚಾಲ್ತಿಯಲ್ಲಿರುವ 100 ರೂ. ಮುಖಬೆಲೆಯ ನೋಟುಗಳು ಚಾಲ್ತಿಯಲ್ಲಿರುತ್ತವೆ. ಮುಂದಿನ ದಿನಗಳಲ್ಲಿ ಹೊಸ ವಿನ್ಯಾಸದ ನೋಟುಗಳ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಆರ್ಬಿಐ ತಿಳಿಸಿದೆ.