ಭಟ್ಕಳ: ಆರ್.ಎನ್.ಎಸ್ ಆಸ್ಪತ್ರೆ, ಆರ್.ಎನ್.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಉದ್ಯಮಿಗಳು, ಆಧುನಿಕ ಮುರುಡೇಶ್ವರದ ನಿರ್ಮಾತೃ ಡಾ|| ಆರ್.ಎನ್.ಶೆಟ್ಟಿ ಯವರ 90ನೇ ಜನ್ಮದಿನದ ಪ್ರಯುಕ್ತ ಅ.9ರಂದು ಭಟ್ಕಳ ತಾಲೂಕಾ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಕುರಿತು ಕನ್ನಡ ಮತ್ತು ಇಂಗ್ಲೀಷ್ ಬಾಷೆಯಲ್ಲಿ ಪ್ರಬಂಧ ಸ್ಪರ್ಧೆ ಎರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸ್ಪರ್ಧೆಯು ಆರ್.ಎನ್.ಶೆಟ್ಟಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು ತಾಲೂಕಿನ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದೂ ತಿಳಿಸಲಾಗಿದೆ.
ದಿನಾಂಕ ಅ.10ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ತನಕ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ “ಬೃಹತ್ ರಕ್ತದಾನ” ಶಿಬಿರವನ್ನು ಆರ್.ಎನ್.ಎಸ್ ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡುವ ಮೂಲಕ ಸಹಕರಿಸುವಂತೆ ಆರ್.ಎನ್.ಎಸ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ||ಚೇತನ ಕಲ್ಕೂರ, ಆರ್.ಎನ್.ಶೆಟ್ಟಿ ಪ.ಪೂ ಕಾಲೇಜಿನ ಪ್ರಾಚಾರ್ಯ ಮಾಧವ ಪಿ., ಆರ್.ಎನ್.ಎಸ್ ವಿದ್ಯಾನಿಕೇತನ ಪ್ರಾಚಾರ್ಯ ಡಾ| ಸುರೇಶ್ ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9481758637, 9480043563, 9880253360 ಸಂಪರ್ಕಿಸಬಹುದಾಗಿದೆ ಎಂದೂ ತಿಳಿಸಿದ್ದಾರೆ.