ಕಾರವಾರ:ನಗರಸಭೆಯ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಡತಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದರು, ವ್ಯಾಪಾರಿ ಮಳಿಗೆಗಳಿಂದ ನಗರಸಭೆಗೆ ಬರಬೇಕಾದ ಬಾಡಿಗೆಗಳನ್ನು ಸರಿಯಾಗಿ ವಸೂಲಿ ಮಾಡುತ್ತಿರಲಿಲ್ಲ. ಮಳಿಗೆಗಳ ಲೀಸ್ ಅವಧಿ ಮುಗಿದರೂ ಯಾವುದೇ ಕ್ರಮ ತೆಗೆದುಕೊಳ್ಳದೆ, ಮಾಹಿತಿಯನ್ನು ನೀಡುತ್ತಿರಲಿಲ್ಲ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಕಾರವಾರ ನಗರಸಭೆ ಪ್ರಭಾರ ತೆರಿಗೆ ಹಾಗೂ ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.
ತೇಲು ಹರಿಕಂತ್ರ ಎಂಬುವರೇ ಅಮಾನತಾದ ಕಂದಾಯ ಅಧಿಕಾರಿ. ನಗರಸಭೆ ಕಂದಾಯ ವಿಭಾಗದ ಕಡತಗಳನ್ನು ಸರಿಯಾಗಿ ನಿರ್ವಹಿಸದೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪ ಇವರ ವಿರುದ್ಧ ಕೇಳಿ ಬಂದಿದೆ ಎನ್ನಲಾಗಿದೆ.
ಅಲ್ಲದೆ ಈ ಬಗ್ಗೆ ಯಾವುದೇ ಕಡತಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಪದೇ ಪದೆ ಕರ್ತವ್ಯಲೋಪ ಎಸಗುತ್ತಿರುವ ಬಗ್ಗೆ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ದೂರನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.