ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಇನ್ನಿಲ್ಲ. ಅವರು ಸೋಮವಾರ ಬೆಳಗ್ಗೆ ಕೋಲ್ಕತಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸೋಮನಾಥ್ ಚಟರ್ಜಿ ಅವರಿಗೆ ಇಂದು ಬೆಳಗ್ಗೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮನಾಥ್ ಚಟರ್ಜಿ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಂಬಂಧಿ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದರು.
ತೀವ್ರ ಅನಾರೋಗ್ಯದ ಕಾರಣ ಚಟರ್ಜಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,. ಚಿಕಿತ್ಸೆ ನೀಡಲಾಗುತ್ತಿದ್ದ ಸಂದರ್ಭದಲ್ಲಿ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಹಿರಿಯ ಮುಖಂಡರಾಗಿರುವ ಸೋಮನಾಥ್ ಚಟರ್ಜಿ ಅವರು 10 ಬಾರಿ ಲೋಕಸಭಾ ಸಂಸದರಾಗಿ ಕಾರ್ಯ ನಿರ್ವಹಿಸಿದ್ದರು. 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು

RELATED ARTICLES  ಸಿದ್ದರಾಮಯ್ಯ ನೀನೊಬ್ಬ ಬಚ್ಚಾ, ನಿನ್ನನ್ನು ಕಂಡರೆ ಮೋದಿಜಿಗೆ ಭಯವಿಲ್ಲ.