ಬೆಂಗಳೂರು: ಮಲೆನಾಡು ಮತ್ತು ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮುಂಗಾರಿನ ಅಬ್ಬರ ಜೋರಾಗಿದೆ. ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇಂದು ಉಡುಪಿ, ದಕ್ಷಿಣಕನ್ನಡ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ತೀರದ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರಿ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರೆ. ಅಡಿಕೆ ಮರಕ್ಕೆ ಕೊಳೆರೋಗ ಬರುವ ಭೀತಿಯಲ್ಲಿದ್ದು,ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ .
ಮಲೆನಾಡಿನ ಕೆಲ ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಲಾಶಯದಿಂದ ನೀರನ್ನು ಹೊರಬಿಡಲಾಗಿದೆ. ನದಿತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

RELATED ARTICLES  ಶಿಕ್ಷಕರ ಅರ್ಹತಾ ಪರೀಕ್ಷೆ ( TET) -2022ರ ಕೀ ಉತ್ತರ ಪ್ರಕಟ