ಹಾಸನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಜೆಟ್ ನಲ್ಲಿ ಹಾಗೂ ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಇರುವ ರೈತರ 37 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲು ಮುಂದಿನ ಗುರುವಾರ ಆದೇಶ ನೀಡುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅವರು ಹಾಸನದ ಹರದನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದು, ರೈತರ ಸಾಲಮನ್ನಾ ಮಾಡಲು ಕ್ರಮ ಕೈಗೊಂಡಿದ್ದೇನೆ. ರೈತರ ಎರಡು ಲಕ್ಷದವರೆಗಿನ ಸಾಲವನ್ನುಮನ್ನಾ ಮಾಡಲು ಆದೇಶ ನೀಡುವುದಾಗಿ ತಿಳಿಸಿದರು.
ಬ್ಯಾಂಕ್ ಗಳಿಗೆ ಮುಂದಿನ ವರ್ಷವೇ ಹಣ ನೀಡಲು ತಯಾರಿ ನಡೆದಿದೆಎಂದರು.
ಅಧಿಕಾರಕ್ಕೆಬಂದ ಮೇಲೆ ಶೇ.32ರಷ್ಟು ಆದಾಯ ಏರಿಕೆ ಮತ್ತು ಈ ವರ್ಷ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾಕ್ಕೆ 6,500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು .

RELATED ARTICLES  ಪೇದೆ ಸುಭಾಷ್ ಸ್ಥಿತಿ ಗಂಭೀರ