ಕಾರವಾರ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಇದರಿಂದಾಗಿ ಇದೀಗ ಪ್ರವಾಹದ ಭೀತಿ ಎದುರಾಗಿದೆ.

ಜಲಾಶಯದ ಗರಿಷ್ಟ ಮಟ್ಟವು 1819 ಅಡಿಗಳಾಗಿದ್ದು, ಈಗಿನ ಜಲಾಶಯ ಮಟ್ಟವು ದಿನಾಂಕ : 13-08-2018 ರಂದು ಬೆಳಿಗ್ಗೆ 8 ಗಂಟೆಗೆ 1812.75 ಅಡಿಗಳನ್ನು ತಲುಪಿದ್ದು, ಒಳ ಹರಿವು ಸುಮಾರು 41,645 ಕ್ಯೂಸೆಕ್ಸ್ ಆಗಿರುತ್ತದೆ.. ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ಶೀಘ್ರವೇ ತಲುಪುವ ಸಾದ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು.

RELATED ARTICLES  ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು.

ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿಎಲ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

RELATED ARTICLES  ಬಿಜೆಪಿ ಟಿಕೆಟ್ ಘೋಷಣೆಗೆ ಕ್ಷಣಗಣನೆ! ಉತ್ತರ ಕನ್ನಡದ 2 ಕ್ಷೇತ್ರಗಳ ಹೆಸರು ಹೈಕಮಾಂಡ್ ಗೆ ರವಾನೆ.