ಯಲ್ಲಾಪುರ : ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಸಾವಿರ ಸಾಲ ಮನ್ನಾ ಮಾಡಿದ್ದರು. ಸುಮಾರು 300 ಕೋಟಿ ಹಣದಲ್ಲಿ 100 ಕೋಟಿ ಹಣ ಡಿಸಿಸಿ ಬ್ಯಾಂಕ್​ಗೆ ಈವರೆಗೆ ಜಮಾ ಆಗಿಲ್ಲ. ಇದರಿಂದ ಸಹಕಾರಿ ಕ್ಷೇತ್ರ ಸಂಕಷ್ಟಕ್ಕೆ ಒಳಗಾಗಿದ್ದು, ಬಡ್ಡಿ ಕಟ್ಟಿಕೊಂಡು ಕುಳಿತುಕೊಳ್ಳುವಂತಾಗಿದೆ. ಆದರೆ ಇದೀಗ ಮತ್ತೆ ಕುಮಾರಸ್ವಾಮಿ ಅವರು ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿನ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿಕೆ ನೀಡಿದ್ದು, ಬಜೆಟ್​​​​ನಲ್ಲಿ ಕೇವಲ 600 ಕೋಟಿ ಹಣ ತೆಗೆದಿಟ್ಟುಕೊಂಡು ರೈತರ ದಿಕ್ಕು ತಪ್ಪಿಸುವ ಕೆಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಅವರು ಮಂಗಳವಾರ ಬೆಳಿಗ್ಗೆ ಪಟ್ಟಣದ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

RELATED ARTICLES  ಕಾರವಾರದ ಪಹರೆ ವೇದಿಕೆಗೆ ಮುರುಘಾ ದಸರಾ ಪ್ರಶಸ್ತಿ

ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಾದರೂ ಇನ್ನೂ ಒಂದೂ ಅಭಿವೃದ್ಧಿ ಕಾಮಗಾರಿಯಾಗಿಲ್ಲ. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವರನ್ನೇ ನೇಮಕ ಮಾಡಿರಲಿಲ್ಲ. ಇದೀಗ ನೇಮಕ ಮಾಡಿದ್ದು, ಯಾವ ಜಿಲ್ಲೆಯಲ್ಲೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು.

ಮಾಜಿ ಪ್ರಧಾನಿ ದೇವೇಗೌಡರು ಕಳೆದ ಎರಡು ದಿನದ ಹಿಂದೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎನ್ನುವ ಹೇಳಿಕೆ ನೀಡಿದ್ದಾರೆ. ಆದರೆ ದುರದೃಷ್ಟವಶಾತ್ ಅಂತಹ ಪಕ್ಷದೊಂದಿಗೆ ಕೈ ಜೋಡಿಸಿ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಇತಿಹಾಸದಲ್ಲಿ 37 ಶಾಸಕರನ್ನ ಹೊಂದಿದ ಪಕ್ಷ ಅಧಿಕಾರಕ್ಕೆ ಬಂದಿದ್ದು, 104 ಶಾಸಕರಿರುವ ಬಿಜೆಪಿ ವಿರೋಧ ಪಕ್ಷದಲ್ಲಿದೆ. ಇನ್ನು ಮೂರು ತಿಂಗಳಾದರು ಸರ್ಕಾರ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾದರೆ ಹೇಗೆ ಅಭಿವೃದ್ಧಿ ಸಾಧ್ಯ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

RELATED ARTICLES  ಬಿ.ಎಡ್ ನಲ್ಲಿ ಅಕ್ಕ ತಮ್ಮನ ಸಾಧನೆ : ಅಕ್ಕ ಪ್ರಥಮ - ತಮ್ಮ ದ್ವಿತೀಯ : ಅದ್ವತೀಯ ಸಾಧನೆಗೆ ಅಭಿನಂದನೆ.

ಪ್ರಧಾನಿ ನರೇಂದ್ರ ಮೋದಿ ಸಾಧನೆಯನ್ನು ಪ್ರತಿಯೊಂದು ಮನೆ ಮನೆಗೂ ತಲುಪಿಸುವ ಕೆಲಸ ಕಾರ್ಯಕರ್ತರಿಂದ ನಡೆಯಬೇಕು. ಮಹಿಳಾ ಮೋರ್ಚಾ, ಎಸ್ ಸಿ ಮೋರ್ಚಾ, ಯುವ ಮೋರ್ಚಾ, ಗಳನ್ನು ಇನ್ನಷ್ಟು ಬಲಪಡಿಸಿ, ಹಿಂದುಳಿದ ವರ್ಗದ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರಿಂದ ನಡೆಯಬೇಕು ಎಂದು ಅವರು ಕರೆ ನೀಡಿದರು.

ಕುಮಟಾ ಶಾಸಕ ದಿನಕರ‌ ಶೆಟ್ಟಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ, ಮಾಜಿ ಶಾಸಕ ಹಳಿಯಾಳದ‌ ಸುನೀಲ ಹೆಗಡೆ, ಮಾಜಿ ಶಾಸಕ ಶಿವಾನಂದ ನಾಯ್ಕ ಮುಂತಾದವರು ವೇದಿಕೆಯಲ್ಲಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಡಿ.ಹೆಗಡೆ ನಿರೂಪಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ವಂದಿಸಿದರು.