ಹೊನ್ನಾವರ :ಲಿಂಗನಮಕ್ಕಿ ಅಣೆಕಟ್ಟು ವ್ಯಾಪ್ತಿ ಪ್ರದೇಶದ ಜನರಿಗೆ ಎಚ್ಚರಿಕೆಯ ಸುದ್ದಿಯೊಂದಿದೆ. ಲಿಂಗನಮಕ್ಕಿ ಡ್ಯಾಂನಲ್ಲಿ ನೀರಿನ ಸಂಗ್ರಹ ಹೆಚ್ಚಿದ್ದು ಅಣೆಕಟ್ಟು ಕೆಳದಂಡೆ, ನದಿಪಾತ್ರದ ನಿವಾಸಿಗಳಿಗೆ ಎಚ್ಚರದಿಂದಿರುವಂತೆ ಕೆಪಿಸಿಎಲ್ ಸೂಚನೆ ನೀಡಿದೆ.
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಸತತ ಮಳೆಯಿಂದ ಜಲಾಶಯ ಬಹುತೇಕ ಭರ್ತಿಯಾಗಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಲಿಂಗನಮಕ್ಕಿ ಡ್ಯಾಂ ಕೆಳದಂಡೆ ಹಾಗೂ ಶರಾವತಿ ನದಿ ಪಾತ್ರದ ನಿವಾಸಿಗಳಿಗೆ, ಪ್ರವಾಹದ ಮೊದಲನೇ ಮುನ್ನೆಚ್ಚರಿಕೆ ಸಂದೇಶ ರವಾನಿಸಲಾಗಿತ್ತು.
ನಿರಂತರ ಮಳೆಯಿಂದ ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದ್ದು, ನೀರಿನ ಸಂಗ್ರಹ ಹೆಚ್ಚಳವಾಗುತ್ತಿದೆ ಇದರಿಂದಾಗಿ ಡ್ಯಾಮ್ ನ ೧೧ ಗೇಟ್ ತೆರೆಯಲಾಗಿದ್ದು ಹೊನ್ನಾವರ ಹಾಗೂ ನದೀ ಪಾತ್ರದ ಭೂಮಿಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ.
ಈ ಹಿಂದೆಯೇ ಆಣೆಕಟ್ಟೆಯ ಕೆಳದಂಡೆ, ನದಿ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಜಾನುವಾರುಗಳನ್ನು ಬಿಡಬಾರದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರ ಆರ್.ಶಿವಕುಮಾರ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದುದನ್ನು ಇಲ್ಲಿ ಸ್ಮರಿಸಬಹುದು.