ಬೆಂಗಳೂರು, : ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಬಳಸಿ ಬಿಸಾಡಬಹುದಾದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್‌ಗಳನ್ನು ಬಳಸುವಂತಿಲ್ಲ. ಪ್ಲಾಸ್ಟಿಕ್ ಬಾಟಲ್ ಬಳಕೆಯನ್ನು ನಿಷೇಧಿಸಿ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ.
ಸರ್ಕಾರಿ ಕಚೇರಿಗಳಲ್ಲಿ, ಸರ್ಕಾರಿ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧಿಸಲಾಗುತ್ತದೆ. ದೊಡ್ಡ ಕ್ಯಾನ್‌ಗಳಲ್ಲಿ ನೀರನ್ನು ತಂದು ಸ್ಟೀಲ್, ಗಾಜು ಅಥವ ಕಾಗದದ ಲೋಟಗಳ ಮೂಲಕ ನೀರು ಪೂರೈಕೆ ಮಾಡಬೇಕು.
ಉತ್ತರಾಖಂಡದ ಸಿತಾರ್ ಗಂಜ್‍ನಲ್ಲಿ ಪ್ಲಾಸ್ಟಿಕ್ ಪಾರ್ಕ್: ಅನಂತ್ ಕುಮಾರ್
ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ, ಇದರ ಖರೀದಿ ವೆಚ್ಚವೂ ಅಧಿಕವಾಗಿತ್ತು. ಆದ್ದರಿಂದ, ಅರಣ್ಯ ಮತ್ತು ಪರಸರ ಇಲಾಖೆ ಬಾಟಲ್ ಬಳಕೆ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಿತ್ತು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 1, 2 ರೂ.ಗೆ ಕುಡಿಯುವ ನೀರು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಆದೇಶದ ಪ್ರಕಾರ ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳು ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ನಲ್ಲಿ ಕುಡಿಯುವ ನೀರು ಪೂರೈಕೆ ಮಾಡುವಂತಿಲ್ಲ.
ಪರ್ಯಾಯ ಮಾರ್ಗಗಳು : ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆದ್ದರಿಂದ, ದೊಡ್ಡ ಸರ್ಕಾರಿ ಕಚೇರಿಯಾದರೆ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಬೇಕಾಗುತ್ತದೆ.
ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಕ್ರಶ್ ಯಂತ್ರ: ಕೆಲಸ ಹೇಗೆ?
ಸಭೆ, ಸಮಾರಂಭಗಳು ಇದ್ದಾಗ 20 ಲೀಟರ್ ಕ್ಯಾನ್‌ನಲ್ಲಿ ಕುಡಿಯುವ ನೀರು ತರಿಸಬೇಕು. ಸ್ಟೀಲ್, ಪೇಪರ್ ಅಥವ ಗಾಜಿನ ಲೋಟದ ಮೂಲಕ ಅವುಗಳನ್ನು ಸರಬರಾಜು ಮಾಡಬಹುದಾಗಿದೆ.
ಈಗಾಗಲೇ ಸರ್ಕಾರ 2016ರ ಮಾರ್ಚ್ 11ರಂದು ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದಾಸ್ತಾನು ನಿಷೇಧಿಸಿ ಆದೇಶ ಹೊರಡಿಸಿದೆ. ಹಲವು ಮಾದರಿಯ ಪ್ಲಾಸ್ಟಿಕ್ ಕವರ್, ತಟ್ಟೆ, ಚಮಚ, ಟೇಬಲ್ ಮೇಲೆ ಹಾಸುವ ಶೀಟ್‌ಗಳ ಬಳಕೆ ನಿಷೇಧಿಸಲಾಗಿದೆ.