ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಧ್ಯಾರ್ಥಿ -ಶಿಕ್ಷಕ- ರಾಷ್ಟ್ರನಿರ್ಮಾಣ ಎಂಬ ವಿಷಯದ ಕುರಿತು ಸ್ವರಚಿತ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧೆಯು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿಯೇ ನಡೆಯಲಿದೆ. ಆಸಕ್ತ ಶಿಕ್ಷಕರು ತಮ್ಮ ಸ್ವರಚಿತ ಕವಿತೆಯನ್ನು ಇದೇ ಆಗಸ್ಟ 30ನೇ ತಾರೀಖಿನಂದು ಸಂಜೆ 5ಗಂಟೆಯ ಒಳಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ತಲುಪಿಸಬೇಕೆಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448756091 ದೂರವಾಣಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.
ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿನ ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ,ಸಂಸ್ಕøತಿಗೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ದಿನಾಂಕ 1-9-2018ರ ಶನಿವಾರ ಮುಂಜಾನೆ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಜರುಗಲಿದ್ದು ಪ್ರತಿ ಪ್ರೌಢಶಾಲೆಯಿಂದ ಮೂರು ವಿಧ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಭಾಗವಹಿಸಲು ಅವಕಾಶವಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಯಾದಿಯನ್ನು ದಿನಾಂಕ 30-08-2018ರ ಗುರುವಾರ ಸಂಜೆ 5ಗಂಟೆಯ ಒಳಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಗೆ ತಲುಪಿಸುವಂತೆ ಕಸಾಪ ತಾಲೂಖಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448756091 ದೂರವಾಣಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.