ಬೆಂಗಳೂರು: ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ .25ರಿಂದ ಮತ್ತೇ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಈ ಎಲ್ಲ ಕರಾವಳಿ ಪ್ರದೇಶಗಳ, ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡಿನ ಹಲವೆಡೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆ ಸುರಿಯಲಿದೆ.
ಈ ಮೊದಲು ದಕ್ಷಿಣ ಕನ್ನಡ ಹಾಗೂ ಕೊಡಗಿನ ಹಲವು ಕಡೆ ಅಪಾರ ಹಾನಿಯಾಗಿರುವುದರಿಂದ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಿದೆ.