ಆಂಧ್ರ: ಟಿಡಿಪಿ ಮುಖಂಡ ,ನಟ ನಂದಮೂರಿ ಹರಿಕೃಷ್ಣ ಅವರು ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಸಮಯದಲ್ಲಿ ನಡೆದಿರುವ ಘಟನೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ.ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಮೂರಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಕಾಮಿನೇನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.