ಕುಮಟಾ: ತಾಲೂಕಿನ ಡಾ. ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಜಲಧಿ ತರಂಗ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು .
ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು .ಕಾರ್ಯಕ್ರಮ ಉದ್ಘಾಟಿಸಿ ಜಲಧಿ ತರಂಗ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರುವುದರೊಂದಿಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು .
ಕೆನರಾ ಎಜುಕೇಷನ್ ಸೊಸೈಟಿಯ ಕಾರ್ಯಾಧ್ಯಕ್ಷರಾದ ಶ್ರೀ ಮುರಳಿಧರ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಟಿವಿ ಹಾಗೂ ಮೊಬೈಲ್ ಫೋನ್ ಬಳಕೆಯನ್ನು ಕಡಿಮೆ ಮಾಡಬೇಕು ಹೆಚ್ಚಿನ ಸಮಯವನ್ನು ಓದಿನಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು .
ಡಾಕ್ಟರ್ ಯು.ಜಿ ಶಾಸ್ತ್ರೀಯ ಅಧ್ಯಕ್ಷತೆ ವಹಿಸಿದ್ದರು .ಕಾರ್ಯಕ್ರಮದಲ್ಲಿ ಎಲ್.ವಿ ಶಾನಭಾಗ ಉಪಸ್ಥಿತರಿದ್ದರು ಡಾ ಜಿ.ಎಲ್ ಹೆಗಡೆ ಎಲ್ಲರನ್ನು ಸ್ವಾಗತಿಸಿದರು .ದಿನೇಶ್ ನಾಯ್ಕ ವಂದಿಸಿದರು .