ಕುಮಟಾ: ಮನೆಯಲ್ಲಿ ಹಾಗೂ ಹಳ್ಳ ಕೊಳ್ಳಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಬ್ಬ ತೆಂಗಿನ ಮರವೇರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹೌದು, ರವಿ ಯಶವಂತ ಹಳ್ಳೇರ ಎಂಬ ವ್ಯಕ್ತಿ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಮೂಲತಃ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದವನೆಂದು ಈತನನ್ನು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕುಮಟಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ಮಾಹಿತಿ ಹೊರಬರಲಿದೆ.