ಶ್ರೀರಾಮಚಂದ್ರಾಪುರಮಠದ ವಿರುದ್ಧ ಷಡ್ಯಂತ್ರ, ಶ್ಯಾಮ್ ಭಟ್ ಕೈವಾಡ!ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಹಿರಂಗವಾಗಿದೆ.!!

ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಜಾಗದ ವಿಷಯದಲ್ಲಿ ಅನಗತ್ಯ ಕಿರುಕುಳ ನೀಡಿ, ಮಠದ ಪ್ರತಿಷ್ಠೆಗೆ ಧಕ್ಕೆ ತರುವ ಷಡ್ಯಂತ್ರದ ಹಿಂದಿರುವ ವ್ಯಕ್ತಿಯ ಹೆಸರು ಬಹಿರಂಗವಾಗಿದೆ.
ಕಳೆದ ವಾರ ರಾಜ್ಯ ಉಚ್ಚ ನ್ಯಾಯಾಲಯ ಬಿಬಿಎಂಪಿ ಯನ್ನು ತರಾಟೆಗೆ ತೆಗೆದುಕೊಂಡು, ಸಂಬಂಧಿತ 4 ಜನ ಅಧಿಕಾರಿಗಳಿಗೆ 50,000 ಸಾವಿರ ದಂಡ ಸ್ವರೂಪದ ಠೇವಣಿಗೆ ನ್ಯಾಯಾಲಯ ಆದೇಶಿಸಿತ್ತು.

ಈ ಕುರಿತು ಇಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಮಾನ್ಯ ಉಚ್ಚನ್ಯಾಯಾಲಯದ ವಿನೀತ್ ಕೊಠಾರಿ ಅವರಿದ್ದ ನ್ಯಾಯಪೀಠದ ಮುಂದೆ ಹಾಜರಾದ ಬಿಡಿಎ ಇಂಜಿನಿಯರ್ (ಇತ್ತೀಚಿಗೆ ನಿವೃತ್ತ) ರಾಜಗೋಪಾಲ್ ಅವರು *”ಅಂದಿನ ಬಿಡಿಎ ಆಯುಕ್ತ ಶ್ಯಾಮ್ ಭಟ್ ಹಾಗೂ ಇತರ ಹಿರಿಯ ಅಧಿಕಾರಿಗಳ ಸೂಚನೆಯಂತೆ, ತಾವು ಈ ಕ್ರಮ ಕೈಗೊಂಡಿದ್ದೆ”* ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವಾರು ಆಯಕಟ್ಟಿನ ಜಾಗದಲ್ಲಿರುವ ವ್ಯಕ್ತಿಗಳು ವ್ಯವಸ್ಥಿತವಾಗಿ ಶ್ರೀಮಠದ ವಿರುದ್ಧ ಷಡ್ಯಂತ್ರದಲ್ಲಿ ತೊಡಗಿಕೊಂಡಿದ್ದರು ಎಂಬುದು ಸಾಬೀತಾದಂತಾಗಿದೆ!

RELATED ARTICLES  ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ! ಯಾರಾರಿಗೆ ಎಷ್ಟೆಷ್ಟು?

ಹಿನ್ನೆಲೆ:
ಪ್ರಸ್ತುತ ಜಾಗವು 1978ನೇ ಇಸವಿಯಲ್ಲಿ ಶ್ರೀರಾಮಚಂದ್ರಾಪುರಮಠಕ್ಕೆ ಕ್ರಯಪತ್ರದ ಮೂಲಕ ನೋಂದಾಯಿತವಾಗಿದ್ದು, ಶ್ರೀಮಠದ ಹೆಸರಿನಲ್ಲಿ ಖಾತಾ ಆಗಿ, ಕಂದಾಯವನ್ನೂ ಕಟ್ಟಿಕೊಂಡು ಬರಲಾಗುತ್ತಿದೆ. ಜಾಗವು ಮಠದ ಸ್ವಾಧೀನದಲ್ಲೇ ಇದ್ದು, ಎರಡು ಮಹಡಿಯ ಕಟ್ಟಡವು ಇತ್ತು. ಆ ಜಾಗದಲ್ಲಿ ನೂತನ ಧರ್ಮಶಾಲಾ ಕಟ್ಟಡವನ್ನು ನಿರ್ಮಿಸಲು ಬಿಬಿಎಂಪಿಯಿಂದ ಅಧಿಕೃತ ಕಟ್ಟಡ ನಕಾಶೆಗೆ ಪರವಾನಗಿಯನ್ನು ಪಡೆದು, ಕಾಮಗಾರಿಯನ್ನು ಆರಂಭಿಸಲು ಮುಂದಾಗಿತ್ತು. ಆದರೆ 2015 ರಲ್ಲಿ ಬಿ.ಡಿ.ಎ ಯಿಂದ ಬಂದ ಪತ್ರದ ಆಧಾರದಮೇಲೆ, ಪರವಾನಗಿ ಅನುಮತಿಯನ್ನು ಹಿಂಪಡೆದು ಬಿಬಿಎಂಪಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ, ಮಠ ಉಚ್ಚನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.

RELATED ARTICLES  ತೆರಿಗೆ ಇಲಾಖೆ ತನಿಖಾ ದಳಕ್ಕೆ ದೂರು

ವಿಚಾರಣಾ ಸಂದರ್ಭದಲ್ಲಿ ಬಿಬಿಎಂಪಿಯ ಕ್ರಮದ ಕುರಿತು ಕಟುವಾಗಿ ಟೀಕಿಸಿದ್ದ ಉಚ್ಚನ್ಯಾಯಾಲಯ, ಸಂಬಂಧಿತ ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳಿಗೆ ತಲಾ 50,000 ರೂ ದಂಡ ಸ್ವರೂಪವಾಗಿ ಉಚ್ಚನ್ಯಾಯಾಲಯದಲ್ಲಿ ಠೇವಣಿ ಮಾಡಲು, ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಜರಿರಲು ಹಾಗೂ ಬಿಬಿಎಂಪಿಯ ಪರವಾನಗಿ ರದ್ಧತಿ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿ ಆದೇಶಿಸಿತ್ತು.