ನವದೆಹಲಿ: ಇಂದು ಸುಪ್ರೀಂ ಕೋರ್ಟ್ ಒಂದು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಎಸ್’ಸಿ/ಎಸ್’ಟಿ)ದ ಸದಸ್ಯರು ಮತ್ತೊಂದು ರಾಜ್ಯದಲ್ಲಿ ಮೀಸಲಾತಿ ಸೌಲಭ್ಯ ಪಡೆಯುವಂತಿಲ್ಲ ಎಂದು ಹೇಳಿದೆ.
ಶಿಕ್ಷಣ ಮತ್ತು ಉದ್ಯೋಗ ಕ್ಕಾಗಿ ಇನ್ನೊಂದು ರಾಜ್ಯಕ್ಕೆ ಹೋಗುವ ಎಸ್ಸಿ/ಎಸ್ಟಿ ಸದಸ್ಯರು ಆ ರಾಜ್ಯದಲ್ಲಿ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹತೆ ಪಡೆದಿಲ್ಲವೆಂದು ಎಂದು ನ್ಯಾಯಮೂರ್ತಿ ರಂಜನ್ ಗೋಗೊಯಿ ನೇತೃತ್ವದ ಸಂವಿಧಾನಿಕ ಪೀಠ ಸ್ಪಷ್ಟಪಡಿಸಿದೆ.
ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಂದು ಗುರುತಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯದಲ್ಲಿಯೂ ತಾನು ಪರಿಶಿಷ್ಟ ಜಾತಿಯ ವ್ಯಕ್ತಿ ಎಂದು ಘೋಷಿಸಲ್ಪಟ್ಟಿದೆ ಎಂಬ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಡವಾಗಿ ಹೇಳಿದೆ.
ದೆಹಲಿಯಲ್ಲಿ ಇತರೆ ರಾಜ್ಯಗಳ ಎಸ್ಸಿ/ಎಸ್ಟಿ ಸದಸ್ಯರು ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಬಹುದೆ ಎಂಬ ಕುರಿತು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ತೀರ್ಪು ನೀಡಿದೆ ಎಂದು ವರದಿಯಾಗಿದೆ.