ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2018-19ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಶಾಸ್ಟ್ರೀಯ ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನಾ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂಪಾಯಿ ಶಿಷ್ಯವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಅಕಾಡೆಮಿ ಕಚೇರಿ ವೇಳೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಅಲ್ಲದೆ ಅಕಾಡೆಮಿಯ ವೆಬ್ಸೈಟ್ www.karnatakasangeetanrityaacademy.com ಇಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಿಡಿ, ಜೆ.ಸಿ.ರಸ್ತೆ, ಬೆಂಗಳೂರು -560002 ಇಲ್ಲಿಗೆ ಸಂಪರ್ಕಿಸಬಹುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15-09-2018 ರೊಳಗೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.