ಬೆಂಗಳೂರು: ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧನೆ ಮಾಡುವ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.
2017-18ನೇ ಸಾಲಿನಲ್ಲಿ ಕನ್ನಡ ಕಡ್ಡಾಯ ಆದೇಶ ಹೊರಡಿಸಲಾಗಿದ್ದರೂ, ಸಿಬಿಎಸ್‌ಸಿ, ಐಸಿಎಸ್‌ಇ ಹಾಗೂ ಇತರೆ ಪಠ್ಯ ಕ್ರಮ ಹೊಂದಿರುವ ಬಹುತೇಕ ಖಾಸಗಿ ಶಾಲೆಗಳು ಕನ್ನಡ ಬೋಧಿಸುತ್ತಿಲ್ಲ. ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ಇತರೆ ಪಠ್ಯ ಕ್ರಮ ಇದ್ದರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದ ಶಾಲೆಗಳ ಪಟ್ಟಿಯನ್ನು ಸೆ.5ರೊಳಗೆ ಕಳುಹಿಸುವಂತೆ ಜಿಲ್ಲೆಗಳ ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶನೀಡಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯ ಮೇರೆಗೆ ರಾಜ್ಯ ಸರಕಾರ 2015ರಲ್ಲಿ ‘ಕನ್ನಡ ಭಾಷಾ ಕಲಿಕಾ ಅಧಿನಿಯಮ’ವನ್ನು ರೂಪಿಸಿತ್ತು. ಇದರ ಆಧಾರದ ಮೇಲೆ 2017ರಲ್ಲಿ ‘ಕನ್ನಡ ಭಾಷಾ ಕಲಿಕಾ ನಿಯಮ’ಗಳನ್ನು ಜಾರಿಗೆ ತರಲಾಗಿದೆ. 2017-18ನೇ ಶೈಕ್ಷಣಿಕ ಸಾಲಿನಿಂದ 1ರಿಂದ 10ನೇ ತರಗತಿವರೆಗೆ ಹಂತ ಹಂತವಾಗಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯ ಮಾಡಿದೆ. ಆ ಮೂಲಕ ಎಲ್ಲಾ ಶಾಲೆಗಳಲ್ಲಿ ಪ್ರತಿವರ್ಷ ಒಂದೊಂದು ತರಗತಿಯಂತೆ 2026-27ನೇ ಸಾಲಿಗೆ 10ನೇ ತರಗತಿವರೆಗೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಟ್ಟುನಿಟ್ಟಾಗಿ ಕಲಿಸಬೇಕಿದೆ.
ರಾಜ್ಯ ಪಠ್ಯಕ್ರಮಕ್ಕೆ ಸಿಬಿಎಸ್‌ಸಿ, ಐಸಿಎಸ್‌ಸಿ ಹಾಗೂ ಇತರೆ ಪಠ್ಯಕ್ರಮ ಬೋಧಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸಲು ನಿರಾಕರಿಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಂತಹ ಖಾಸಗಿ ಶಾಲೆಗಳ ವಿರುದ್ಧ ರಾಜ್ಯ ಪಠ್ಯಕ್ರಮಕ್ಕೆ ಸಿಬಿಎಸ್‌ಸಿ, ಐಸಿಎಸ್‌ಸಿ ಹಾಗೂ ಇತರೆ ಪಠ್ಯಕ್ರಮ ಬೋಧಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸಲು ನಿರಾಕರಿಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಂತಹ ಖಾಸಗಿ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ ನೀಡಿತ್ತು.