ಬೆಂಗಳೂರು: ಬುಧವಾರ ಬೆಳಗಿನ ಜಾವ ದೇವನಹಳ್ಳಿಯ ಸಣ್ಣ ಅಮಾನಿಕೆರೆ ಬಳಿ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಅವಘಡದಲ್ಲಿ ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

RELATED ARTICLES  ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಕೊನೆಯ ಅವಕಾಶ.

ಬೆಂಗಳೂರಿನಿಂದ ಸ್ನೇಹಿತನ ಮನೆಗೆ ತೆರಳುತ್ತಿದ್ದ ವೇಳೆ ಕಬ್ಬಿಣದ ಸರಳು ಸಾಗಿಸುತ್ತಿದ್ದ ಕ್ಯಾಂಟರ್ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಮೃತ ದುರ್ದೈವಿಗಳು ಕಿಮ್ಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾದ ವಿಶಾಲ್, ಪ್ರಜ್ವಲ್ ಮತ್ತು ಭೂಷಣ್ ಎಂದು ತಿಳಿದು ಬಂದಿದೆ.

RELATED ARTICLES  'ಮೋದಿ ಹೇ ತೋ ಮುಮ್ಕಿನ್‌ ಹೇ' ಘೋಷವಾಕ್ಯದೊಂದಿಗೆ ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ.

ಸ್ಥಳದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕೃಂದನ ಮುಗಿಲು ಮುಟ್ಟಿದೆ.
ಏರ್ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.