ಚೆನ್ನೈ: ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳಿಂದ ಚೆನ್ನೈನ 40 ಕಡೆ ದಾಳಿ ನಡೆಸಿದೆ. ತಮಿಳುನಾಡಿನಲ್ಲಿ ವ್ಯಾಪಕ ಸುದ್ದಿಯಾಗಿದ್ದ ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿ , ಆರೋಗ್ಯ ಸಚಿವ ವಿಜಯ್ ಭಾಸ್ಕರ್ ರವರ ಮನೆ ಸೇರಿದಂತೆ ಚೆನ್ನೈನಲ್ಲಿರುವ 40 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ 40 ಪ್ರದೇಶಗಳ ಪೈಕಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್, ಚೆನ್ನೈ ಪೊಲೀಸ್ ಆಯುಕ್ತರು ಮತ್ತು ಇತರೆ ಸ್ಥಳೀಯ ರಾಜಕೀಯ ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ… ಬಿಎಸ್ ವೈಗೆ ಸಿಎಂ ಸವಾಲ್

ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಈ ಹಿಂದೆ ತಂಬಾಕು, ಗುಟ್ಕಾ ಪದಾರ್ಥಗಳ ಮೇಲೆ ನಿಷೇಧ ಹೇರಿತ್ತು. ಆದರೆ ನಿಷೇಧಿಸಿದರೂ ಸಹ ತಮಿಳುನಾಡಿನಲ್ಲಿ ಗುಟ್ಕಾ ಮತ್ತು ತಂಬಾಕು ವ್ಯಾಪಾರ ಯಾವೂದೇ ಭಯವಿಲ್ಲದೆ ಸಾಗಿತ್ತು.

ಈ ಸಂಬಂಧ ತಮಿಳುನಾಡು ಆರೋಗ್ಯ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ವ್ಯಾಪಾರಿಗಳಿಂದ ಸುಮಾರು 40 ಕೋಟಿ ರೂ. ಕಿಕ್ ಬ್ಯಾಕ್ ಪಡೆದು ಅನಧಿಕೃತವಾಗಿ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು.

RELATED ARTICLES  ಉತ್ತರ ಕನ್ನಡದಲ್ಲಿ ಮತ್ತೆ ಏರಿದ ಕೊರೋನಾ ಪಾಸಿಟೀವ್ ಕೇಸ್ ಸಂಖ್ಯೆ

ಅರ್ಜಿಯ ವಿಚಾರಣೆ ನಡೆಸಿದ್ದು, ಮದ್ರಾಸ್ ಹೈಕೋರ್ಟ್ ನಲ್ಲಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು.
ಸಿಬಿಐ ಅಧಿಕಾರಿಗಳು ತನಿಖೆಗೆ ಆದೇಶಿಸಿದ ಬೆನ್ನಲ್ಲೇ ತಮಿಳುನಾಡಿನ ಖ್ಯಾತ ತಂಬಾಕು ಉದ್ಯಮಿ ಮಾಧವ ರಾವ್ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಡೈರಿಯೊಂದು ಲಭಿಸಿತ್ತು. ಈ ಡೈರಿಯಲ್ಲಿರುವ ಮಾಹಿತಿಯನ್ನಾಧರಿಸಿ ಇಂದು ಸಿಬಿಐ ಅಧಿಕಾರಿಗಳು ಮತ್ತೆ 40 ಕಡೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ ಎಂದು ವರದಿಯಾಗಿದೆ.