Home ಜಿಲ್ಲೆಗಾಂಜಾ ಮಾರಾಟ : ಯುವಕರ ಬಂಧನ

ಗಾಂಜಾ ಮಾರಾಟ : ಯುವಕರ ಬಂಧನ

ಪಾಳಾ ಗ್ರಾಮದ ರಾಮಾಪುರ ಕ್ರಾಸ್ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ

by News Desk
0 comments

ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ರಾಮಾಪುರ ಕ್ರಾಸ್ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪಟ್ಟಣದ ಯಲ್ಲಾಪುರ ರಸ್ತೆಯ ಮಹಮ್ಮದ ಅನಿಸ್ ಎಜಾಜ್ ಅಹ್ಮದ ಬೇಗ (20) ಬಂಧಿತ ಆರೋಪಿ. ಈತನಿಂದ ಅಂದಾಜು 50,000 ರೂ. ಬೆಲೆ ಬಾಳುವ 903 ಗ್ರಾಂ ಗಾಂಜಾ, ಸ್ಕೂಟಿ ಹಾಗೂ 200ರೂ. ನಗದು ವಶಪಡಿಸಿಕೊಳ್ಳಲಾಗಿದೆ. ರಸ್ತೆಯ ಪಕ್ಕದಲ್ಲಿ ನಿಂತು ಸ್ಕೂಟಿಯ ಡಿಕ್ಕಿಯಲ್ಲಿ ಗಾಂಜಾವನ್ನು ಇಟ್ಟು ಕೊಂಡು ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆ ಎಸ್.ಪಿ. ಎಂ. ನಾರಾಯಣ, ಹೆಚ್ಚುವರಿ ಪೋಲಿಸ ಅಧೀಕ್ಷಕ ಕೃಷ್ಣಮೂರ್ತಿ ಜಿ., ಜಗದೀಶ ನಾಯ್ಕ, ಡಿ.ಎಸ್.ಪಿ ಗಣೇಶ ಕೆ.ಎಲ್. ಅವರ ಮಾರ್ಗದರ್ಶನದಲ್ಲಿ ಸಿಪಿಐ ರಂಗನಾಥ ನೀಲಮ್ಮನವರ, ಪಿಎಸ್‌ಐ ಪರಶುರಾಮ ಮಿರ್ಜಗಿ, ಸಿಬ್ಬಂದಿಗಳಾದ ಮಾಂತೇಶ ಮುಧೋಳ, ಕೋಟೇಶ ನಾಗರವಳ್ಳಿ, ಗಣಪತಿ ಹುನ್ನಳ್ಳಿ, ಬಸವರಾಜ ಒಡೆಯರ ಭಾಗವಹಿಸಿದ್ದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".