Home ದೇಶಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ವಾಪಸ್ಸಾದ ಮೋದಿ.

ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ವಾಪಸ್ಸಾದ ಮೋದಿ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ : ಮುಂಚಿತವಾಗಿ ದೇಶಕ್ಕೆ ವಾಪಸ್

by News Desk
0 comments

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ರಾತ್ರಿ ಭಾರತಕ್ಕೆ ವಾಪಸ್ ಆಗಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿ, ತಮಗಾಗಿ ಏರ್ಪಡಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು ತಮ್ಮ ಪ್ರವಾಸ ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೇಶಕ್ಕೆ ಮರಳಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರ ತ್ವರಿತ ಮರಳುವಿಕೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ರಾಯಲ್ ಪ್ಯಾಲೇಸ್‌ಗೆ ಭೇಟಿ ನೀಡಿ ಸೌದಿ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸೌದಿ ನಾಯಕರೂ ಕೂಡ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಭಾರತಕ್ಕೆ ಮರಳಿದ್ದು, ಈ ಬಗ್ಗೆ ಸೌದಿ ಆಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸೌದಿ ರಾಜಕುಮಾರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಭಾರತಕ್ಕೆ ಯಾವುದೇ ಸಹಾಯ ಮಾಡಲು ಸಿದ್ಧ ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ಸಹಕಾರ ಹೊಂದಿವೆ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".