Home ಮಾಹಿತಿಇಂದು ಎಲ್ಲೆಲ್ಲಿ ಮಳೆ? ಎಲ್ಲಿ ಬಿಸಿಲು? ಹವಾಮಾನ ವರದಿ

ಇಂದು ಎಲ್ಲೆಲ್ಲಿ ಮಳೆ? ಎಲ್ಲಿ ಬಿಸಿಲು? ಹವಾಮಾನ ವರದಿ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಇತರ ಭಾಗಗಳ ಹವಾಮಾನ ವರದಿ ಇಲ್ಲಿದೆ.

by News Desk
0 comments

ನ್ಯೂಸ್ ಡೆಸ್ಸ್ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".