Home ಮಾಹಿತಿಕರ್ನಾಟಕದ ಹವಾಮಾನ ಮುನ್ಸೂಚನೆ

ಕರ್ನಾಟಕದ ಹವಾಮಾನ ಮುನ್ಸೂಚನೆ

01.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

by News Desk
0 comments

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನಂತೆ ಮೇ ಮೊದಲ 3, 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಶಿವಮೊಗ್ಗ ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 6 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಒಂದೆರಡು ಕಡೆ ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಸೀಮಿತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".