Home ಮಾಹಿತಿSSLC Result – ಇಲ್ಲಿದೆ ಮಹತ್ವದ ಮಾಹಿತಿಗಳು.

SSLC Result – ಇಲ್ಲಿದೆ ಮಹತ್ವದ ಮಾಹಿತಿಗಳು.

ನಾಳೆ ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳು ಹೇಗೆ ನೋಡಬೇಕು ಗೊತ್ತೇ?

by News Desk
0 comments

ಬೆಂಗಳೂರು : ಮೇ 2ರಂದು (ಶುಕ್ರವಾರ) ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ.

ಶುಕ್ರವಾರ (ಮೇ 2)ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12:30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಫಲಿತಾಂಶ ಬಿಡುಗಡೆ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 2ರಂದು ಬೆಳಗ್ಗೆ 11: 30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು.

ಫಲಿತಾಂಶ ವೀಕ್ಷಿಸುವುದು ಹೇಗೆ?

ಫಲಿತಾಂಶಕ್ಕಾಗಿ ಸರ್ಕಾರದ ಅಧಿಕೃತ ವೆಬ್‌ಸೈಟ್‌ https://karresults.nic.in/ ನಲ್ಲಿ ಭೇಟಿ ನೀಡಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.

ನಂತರ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿ ಅಗತ್ಯ ಮಾಹಿತಿ ದಾಖಲಿಸಬೇಕು. ನಂತರ ಅಂಕಟ್ಟಿ ತೆರೆದುಕೊಳ್ಳಲಿದ್ದು, ಡೌನ್‌ಲೋಡ್ ಮಾಡಿಕೊಳ್ಳಬಹುದು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".