Home ಅಪರಾಧಜಿಲ್ಲೆಯ ಪ್ರವಾಸಿ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣು

ಜಿಲ್ಲೆಯ ಪ್ರವಾಸಿ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣು

ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಹಿನ್ನೆಲೆ

by News Desk
0 comments

ಕಾರವಾರ : ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ತೀವ್ರ ತಪಾಸಣೆ ನಡೆಸಲಾರಂಭಿಸಿದ್ದಾರೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ‌ ಗೋಕರ್ಣ,‌ ಮುರುಡೇಶ್ವರ ದಲ್ಲಿ ಪೊಲೀಸ್ ಬಿಗು ತಪಾಸಣೆ ಮಾಡಲಾಗುತ್ತಿದ್ದು, ಹೋಮ್ ಸ್ಟೇ ,ರೆಸಾರ್ಡ್‌ಗಳಲ್ಲಿ ಪ್ರವಾಸಿಗರ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಹೋಟೆಲ್, ಲಾಡ್ಜ್ , ಹೋಮ್ ಸ್ಟೇ ಗಳಲ್ಲಿ ಕಡ್ಡಾಯ ಸಿಸಿ ಕ್ಯಾಮರ ಅಳವಡಿಕೆಗೆ ಸೂಚಿಸಲಾಗಿದೆ.

ಇನ್ನೂ ಹೊರರಾಜ್ಯ, ವಿದೇಶಿ ಪ್ರವಾಸಿಗರ ಬಗ್ಗೆ ಸಹ ಮಾಹಿತಿ ಕಲೆಹಾಕಲಾಗುತ್ತಿದ್ದು, ಕರಾವಳಿ ಕಾವಲುಪಡೆ , ಭಾರತೀಯ ಕೋಸ್ಟ್ ಗಾರ್ಡ ನಿಂದ ಕೋಮಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಸಮುದ್ರ ಮಾರ್ಗದಲ್ಲಿ ಬೋಟುಗಳ ದಾಖಲೆ ತಪಾಸಣೆ‌ ನಡೆಸಲಾಗುತ್ತಿದ್ದು ಕರಾವಳಿ ಕಾವಲುಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಅರಬ್ಬೀ ಸಮುದ್ರದಲ್ಲಿ ಗಸ್ತು ತಿರುಗುತ್ತಿವೆ ಎನ್ನಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".