Home ಮಾಹಿತಿಎಸ್.ಎಸ್.ಎಲ್.ಸಿ ಫಲಿತಾಂಶ : ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಎಸ್.ಎಸ್.ಎಲ್.ಸಿ ಫಲಿತಾಂಶ : ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ : ಶಿಕ್ಷಣ ಸಚಿವರ ಮಾಹಿತಿ

by News Desk
0 comments

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".