Home ದೇಶಪಾಕ್ ದಾಳಿಗೆ ಪ್ರತ್ಯುತ್ತರ ನೀಡುತ್ತಿದೆ ಭಾರತ

ಪಾಕ್ ದಾಳಿಗೆ ಪ್ರತ್ಯುತ್ತರ ನೀಡುತ್ತಿದೆ ಭಾರತ

ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ.

by News Desk
0 comments

ಜಮ್ಮು: ಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ.

ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿ ನಡೆಸಿದೆ.

ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ.

ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್‌ಎಸ್ ಪುರ, ಅರ್ನಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕಡೆಗೆ ಪಾಕಿಸ್ತಾನದಿಂದ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ವರದಿ ಮಾಡಿವೆ-ಇವೆಲ್ಲವನ್ನೂ ಎಸ್ -400 ಯಶಸ್ವಿಯಾಗಿ ಹೊಡೆದುರುಳಿಸಿದೆ.

ಇದಕ್ಕೂ ಮೊದಲು ಭಾರತ ಲಾಹೋರ್ ನಲ್ಲಿ ಪಾಕ್ ನ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಹೊಡೆದುರುಳಿಸಿತ್ತು. ಭಾರತೀಯ ಸೇನೆ ಹಾಗೂ ಪಾಕ್ ಸೇನೆ ಈ ದಾಳಿಯನ್ನು ಖಚಿತಪಡಿಸಿದ್ದವು. ಇನ್ನು ಗಡಿ ಭಾಗದಲ್ಲಿ ಪಾಕಿಸ್ತಾನ ಅಪ್ರಚೋದಿತ ಶೆಲ್ ದಾಳಿಯನ್ನು ಮುಂದುವರೆಸಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ಭಾರತೀಯ ಸೇನೆ ಪಾಕಿಸ್ತಾನದ 2 ಎಫ್-16 ಯುದ್ಧ ವಿಮಾನ ಹಾಗೂ ಒಂದು ಜೆಎಫ್-17 ವಿಮಾನವನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".