Home ದೇಶಭಾರತದಿಂದ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ.

ಭಾರತದಿಂದ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ.

ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ಭಾರತ

by News Desk
0 comments

ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು Indian Air Force station ಸಹ ಹೊಂದಿದೆ.

ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಕೋಟೆ ಇರುವ ಲಾಹೋರ್ ನನ್ನೇ ಗುರಿಯಾಗಿಸಿ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ. ಇನ್ನೂ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮೇಲೂ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಸಿಯಾಲ್ ಕೋಟ್, ಕರಾಚಿ ಸೇರಿದಂತೆ ಪಾಕಿಸ್ತಾನದ ವಿವಿಧೆಡೆ ಭಾರತ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದ್ದು, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿದೆ ಎಂದು ವಿವಿಧ ವರದಿಗಳು ತಿಳಿಸಿವೆ.

ಸ್ಫೋಟಗಳನ್ನು ಹೋಲುವ ಶಬ್ದಗಳು ಜಮ್ಮುವಿನಲ್ಲಿ ಭೀತಿಯನ್ನು ಉಂಟುಮಾಡಿವೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ. ಜಮ್ಮು ವಿಮಾನ ನಿಲ್ದಾಣದ ಹೊರಗೆ ಡ್ರೋನ್ ಬೀಳುತ್ತಿರುವುದನ್ನು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನ ದಾಳಿ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಕಂಪ್ಲೀಟ್ ಬ್ಲ್ಯಾಕ್ ಔಟ್ ಮಾಡಲಾಗಿದೆ. ರಾತ್ರಿಯಿಡೀ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಉರಿ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಶೆಲ್ ದಾಳಿ ನಡೆಸಿದ್ದು ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".