Home ಜಿಲ್ಲೆಮಂಜುನಾಥ ಭಟ್ಟ ಸುವರ್ಣಗದ್ದೆಯವರಿಗೆ ಉದ್ಯಮಿ ರತ್ನ ಪ್ರಶಸ್ತಿ

ಮಂಜುನಾಥ ಭಟ್ಟ ಸುವರ್ಣಗದ್ದೆಯವರಿಗೆ ಉದ್ಯಮಿ ರತ್ನ ಪ್ರಶಸ್ತಿ

ಸ್ವರ್ಣಾ ಲೆಟೆಕ್ಸ್‌ನ ಮಾಲಿಕ ಮಂಜುನಾಥ ಜಿ. ಭಟ್ಟ

by News Desk
0 comments

ಕುಮಟಾ : ತಾಲೂಕಿನ ಸುವರ್ಣಗದ್ದೆಯ ಸ್ವರ್ಣಾ ಲೆಟೆಕ್ಸ್‌ನ ಮಾಲಿಕ ಮಂಜುನಾಥ ಜಿ. ಭಟ್ಟ ಅವರಿಗೆ ಸಣ್ಣ ಕೈಗಾರಿಕೆಗಳ ವಿಭಾಗದಲ್ಲಿ ಉದ್ಯಮಿ ರತ್ನ ಪ್ರಶಸ್ತಿ ಲಭಿಸಿದೆ. ಇವರು ಕೈಗವಸು ತಯಾರಿಕೆಯಲ್ಲಿ ಈಗಾಗಲೇ ಪ್ರಸಿದ್ಧರಾಗಿದ್ದಾರೆ.

ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಐಮೆಕ್ಸ್-2025 ಇಂಡಸ್ಟ್ರೀ ಮತ್ತು ಮ್ಯಾನ್ಯುಫ್ಯಾಕ್ಟರಿಂಗ್ ಪ್ರದರ್ಶನದಲ್ಲಿ ಇವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಅವರು ಉದ್ಯಮಿ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಗಿರೀಶ ನಲವಡೆ, ಜಿ.ಸಿ. ಮಠದ, ನಂದು ಕೆಮಿಕಲ್ಸ್‌ನ ಉಷಾ ರಾಮನಾಥ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಮಂಜುನಾಥ ಭಟ್ಟ ಸುವರ್ಣಗದ್ದೆಯವರು ಯುವ ಉದ್ಯಮಿಯಾಗಿ ಗುರುತಿಸಿಕೊಳ್ಳುವ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".