Home ಜಿಲ್ಲೆಉಕ್ಕಿ ಹರಿಯುತ್ತಿರುವ ಬೆಣ್ಣೆಹೊಳೆ, ಕುಮಟಾ ಶಿರಸಿ ರಸ್ತೆ ಬಂದ್.

ಉಕ್ಕಿ ಹರಿಯುತ್ತಿರುವ ಬೆಣ್ಣೆಹೊಳೆ, ಕುಮಟಾ ಶಿರಸಿ ರಸ್ತೆ ಬಂದ್.

ನಡೆಯುತ್ತಿದ್ದ ರಸ್ತೆ ಕಾಮಗಾರಿ - ಜನರಿಗೆ ಇನ್ನು ಓಡಾಟ ಕಷ್ಟ

by News Desk
0 comments

ಕುಮಟಾ : ಶುಕ್ರವಾರ ಮಧ್ಯಾಹ್ನ ಕೆಲವು ಗಂಟೆಗಳ ಕಾಲ ಎಡಬಿಡದೆ ಸುರಿದ ಮಳೆಯಿಂದಾಗಿ ತಾಲೂಕಿನಲ್ಲಿ ಕೂಲಾಹಲವೇ ಸೃಷ್ಟಿಯಾಗಿದೆ. ಮಳೆಯ ಪರಿಣಾಮವಾಗಿ, ಕುಮಟಾ ಶಿರಸಿ ರಸ್ತೆಗೆ ಹೊಂದಿಕೊಂಡಿರುವ ಬೆಣ್ಣೆಹೊಳೆ ಉಕ್ಕಿ ಹರಿದಿದ್ದು, ಸೇತುವೆ ನಿರ್ಮಾಣಕ್ಕೆಂದು ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಿದ್ದ ರಸ್ತೆ ಸಂಪೂರ್ಣ ಕೊಚ್ಚಿಹೋಗಿದೆ. ಇದರಿಂದ ಶಿರಸಿ-ಕುಮಟಾ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ಕುಮಟಾ ಶಿರಸಿ ರಸ್ತೆ ಓಡಾಟ ಕಷ್ಟ ಎಂಬ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ವರದಿ ಪ್ರಸಾರವಾಗಿತ್ತು. ಇದೀಗ ಇಲ್ಲಿಯ ರಸ್ತೆಯೇ ಬಂದ್ ಆಗಿದೆ. ಕುಮಟಾ-ಶಿರಸಿ ಹೆದ್ದಾರಿಯ ಬಹುತೇಕ ಕಡೆಗಳಲ್ಲಿ ಸೇತುವೆ ಕಾಮಗಾರಿಗಾಗಿ ಪೈಪ್ ಹಾಕಿ ಡೈವರ್ಸನ್ ರಸ್ತೆ ನಿರ್ಮಾಣ ಮಾಡಿರುವುದರಿಂದ ಪೈಪ್‌ಗಳಲ್ಲಿ ನೀರು ತುಂಬಿಕೊಂಡು ಡೈವರ್ಸನ್ ರಸ್ತೆಗಳು ಕುಸಿಯುವ ಆತಂಕವಿತ್ತು. ಹಾಗಾಗಿ ರಾತ್ರಿ ಹೊತ್ತಿನಲ್ಲಿ ಈ ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ಬಹಳ ಎಚ್ಚರಿಕೆಯಿಂದ ಸಂಚರಿಸುವಂತೆ ಜಿ.ಪಂ ಮಾಜಿ ಸದಸ್ಯ ಗಜಾನನ ಪೈ ಅವರು ಕಳೆದ ಎರಡು ದಿನಗಳ ಹಿಂದೆ ಮನವಿ ಮಾಡಿದ್ದರು.

ಶುಕ್ರವಾರ ಶಿರಸಿ ಭಾಗದ ಘಟ್ಟದ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆಯಿಂದ ಒಮ್ಮೆಲೆ ಬೆಣ್ಣೆ ಹೊಳೆಗೆ ಹರಿದುಬಂದ ನೀರಿನ ರಭಸಕ್ಕೆ ಡೈವರ್ಸನ್ ರಸ್ತೆಗಳು ಹಾಗು ಪೈಪ್‌ಗಳು ಸಂಪೂರ್ಣ ಕೊಚ್ಚಿಹೋಗಿದ್ದು, ಸಂಚಾರ ಪೂರ್ಣಪ್ರಮಾಣದಲ್ಲಿ ನಿಂತುಹೋಗಿದೆ. ಸಂಚಾರ ಸಂಪೂರ್ಣ ಸ್ಥಗಿತವಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಗಜು ಪೈ ಮಾಹಿತಿ ನೀಡಿದ್ದಾರೆ.

ವೀಡಿಯೋ ಇಲ್ಲಿದೆ ನೋಡಿ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".