Home ಜಿಲ್ಲೆಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆಮಾಡಿ ಜಿಲ್ಲಾಧಿಕಾರಿ ಆದೇಶ

by News Desk
0 comments

ಉಡುಪಿ: ರಾಜ್ಯದಲ್ಲಿ ಕೆಲ ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈಗಾಗಲೇ ಬೆಂಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ.

ಈ ನಡುವೆ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನಾಳೆ (ಜೂನ್ 12) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾತ್ರವಲ್ಲ, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಮಾತ್ರವಲ್ಲ, ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".