ಕಾರವಾರ : ಉತ್ತರಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಹಲ ತಾಲೂಕಿಗೆ ನಾಳೆ (ಜೂನ್ 13) ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (MD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ, 11-06-2025 ರಿಂದ ದಿನಾಂಕ 17-06-2025 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ಯನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರ ಪ್ರಸ್ತಾವನೆಯನ್ನು ಸಹ ಪರಿಗಣಿಸಿ. ಮಕ್ಕಳ ಹಿತದೃಷ್ಟಿಯಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳ ಅಂಗನವಾಡಿ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ:13-06-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಆದೇಶ ಮಾಡಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ13-06-2025 ರಂದು ರಜೆ ಘೋಷಿಸಿ ಆದೇಶಿಸಿದೆ.
ಸದ್ರಿ ಆದೇಶವನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ರವರು ಕಾರ್ಯ ರೂಪಕ್ಕೆ ತರಲು ಸೂಚಿಸಲಾಗಿದೆ.
ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ಹಾಗೂ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದೂ ತಿಳಿಸಲಾಗಿದೆ.