Home ಜಿಲ್ಲೆಈ ವರ್ಷದ ಬೆಸ್ಟ್ ರೊಟೇರಿಯನ್ ಆಗಿ ಗುರುರಾಜ ಶೆಟ್ಟಿ

ಈ ವರ್ಷದ ಬೆಸ್ಟ್ ರೊಟೇರಿಯನ್ ಆಗಿ ಗುರುರಾಜ ಶೆಟ್ಟಿ

ನಾದಶ್ರೀ ಕಲಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾರ್ಪಣೆ

by News Desk
0 comments

ಕುಮಟಾ : ರೋಟರಿ ಕ್ಲಬ್ ಕುಮಟಾ ಕೊಡಮಾಡುವ ಪ್ರಸಕ್ತ ಸಾಲಿನ ಬೆಸ್ಟ್ ರೊಟೇರಿಯನ್ ಪುರಸ್ಕಾರಕ್ಕೆ ರೋಟರಿಯ ಸಕ್ರಿಯ ಸದಸ್ಯ ಹಾಗೂ ವಿಧಾತ್ರಿ ಅಕಾಡೆಮಿಯ ಸಂಸ್ಥಾಪಕ ಗುರುರಾಜ್ ಶೆಟ್ಟಿ ಭಾಜನರಾಗಿದ್ದಾರೆ.

ಅವರು ಕುಮಟಾ ರೋಟರಿ ಕ್ಲಬ್ ನ ಸದಸ್ಯರಾಗಿ ಎರಡು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದು, ಸಮಾಜ ಸೇವೆಯಲ್ಲಿಯೂ ಅವರು ತೊಡಗಿಸಿಕೊಂಡಿದ್ದಾರೆ. ರೋಟರಿಯ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಬೆಸ್ಟ್ ರೋಟಿರಿಯನ್ ಆಗಿ ಗುರುತಿಸಿಕೊಂಡಿದ್ದಾರೆ.

ಗುರುವಾರ ಕುಮಟಾದ ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ರೋಟರಿಯ ಕಾರ್ಯಕ್ರಮದಲ್ಲಿ ಗುರುರಾಜ ಶೆಟ್ಟಿ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಅತುಲ್ ಕಾಮತ್, ಕಾರ್ಯದರ್ಶಿ ವಿನಾಯಕ ಹೆಗಡೆ ಹಾಗೂ ರೋಟರಿ ಪರಿವಾರದ ಸದಸ್ಯರು ಹಾಜರಿದ್ದರು.

ಇವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕಾರ್ಯ ಮಾಡುವಂತಾಗಲಿ ಎಂದು ವಿಧಾತ್ರಿ ಬಳಗದ ಸದಸ್ಯರುಗಳು ಹಾಗೂ ಆಪ್ತೇಷ್ಟರು ಶುಭ ಹಾರೈಸಿದ್ದಾರೆ

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".