Home ಜಿಲ್ಲೆಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಿಧಾತ್ರಿ ಅಕಾಡೆಮಿಯ ಉಪನ್ಯಾಸಕ ಗುರುರಾಜ ಎಸ್ ಶೆಟ್ಟಿ.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಿಧಾತ್ರಿ ಅಕಾಡೆಮಿಯ ಉಪನ್ಯಾಸಕ ಗುರುರಾಜ ಎಸ್ ಶೆಟ್ಟಿ.

ಸರಸ್ವತಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಗುರುರಾಜ ಎಸ್ ಶೆಟ್ಟಿ

by News Desk
0 comments

ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಗುರುರಾಜ ಎಸ್ ಶೆಟ್ಟಿಯವರು ರಾಷ್ಟ್ರ ಮಟ್ಟದ ಸಂಸ್ಥೆ ಇಂಡಿಯನ್ ಟ್ಯಾಲೆಂಟ್ ಒಲಂಪಿಯಾಡ (ಐಟಿಓ) ನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಗೆ ಭಾಜನರಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.

ಐಟಿಓ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಒಂದನೇ ತರಗತಿಯಿಂದ ಹನ್ನೆರಡನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ, ಇಂಗ್ಲೀಷ್, ಗಣಕ ವಿಜ್ಞಾನ, ಹೀಗೆ ಇತ್ಯಾದಿ ವಿಷಯಗಳಿಗೆ ಪ್ರತಿಭಾನ್ವೇಷಣೆ ಪರೀಕ್ಷೆಗಳನ್ನು ನಡೆಸುತ್ತಾ ಬಂದಿರುತ್ತಾರೆ. ಈ ತರಹದ ಸಂಸ್ಥೆಗಳಾದ ಎಸ್.ಓ.ಎಪ್, ಸಿಲ್ವರ್ಝೋನ್, ಐಟಿಓ, ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಂಓ, ಐಎಸ್ಓ, ಐಸಿಓ, ಐಈಓ ಗಳನ್ನು ಗುರುರಾಜ ಶೆಟ್ಟಿಯವರು ಕೊಂಕಣ ಸಂಸ್ಥೆಯಲ್ಲಿ ಯಶಸ್ವಿಯಾಗಿ ವಿದ್ಯಾರ್ಥಿಗಳಿಗೆ ನಡೆಸಿಕೊಂಡು ಬಂದಿರುತ್ತಾರೆ. ಅವರ ಸಮರ್ಪಣಾ ಭಾವ, ನಾಯಕತ್ವ ಗುಣ, ಯುವ ಮನಸ್ಸುಗಳಲ್ಲಿ ಸ್ಪರ್ಧಾತ್ಮಕತೆಯನ್ನು ರೂಪಿಸುವ ನಿಟ್ಟಿನಲ್ಲಿ ನಿರಂತರ ಸೇವೆಯನ್ನು ನೀಡಿರುವುದನ್ನು ಗುರುತಿಸಿ ಈ ಗೌರವವನ್ನು ನೀಡಿರುತ್ತಾರೆ. ನವೆಂಬರ್ ತಿಂಗಳಿನಲ್ಲಿ ಮುಂಬೈನಲ್ಲಿ ನಡೆಯುವ ಸಮಾರಂಭದಲ್ಲಿ ಡಾ. ಕಿರಣ್ ಭೇಡಿ ಹಾಗೂ ಒಲಂಪಿಕ್ ಪ್ರಶಸ್ತಿ ವಿಜೇತೆ ಸೈನಾ ನೆಹವಾಲ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪಡೆಯಲಿದ್ದಾರೆ.

ಈ ಸಾಧನೆಗೈದ ಉಪನ್ಯಾಸಕ ಗುರುರಾಜ ಎಸ್ ಶೆಟ್ಟಿಯವರಿಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿ ಶುಭಾಶಯ ಕೊರಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".