Home ಜಿಲ್ಲೆಜು.೨೭ ರಂದು ಕುಮಟಾಕ್ಕೆ ಆಗಮಿಸಲಿರುವ ನಿಖಿಲ್ ಕುಮಾರಸ್ವಾಮಿ

ಜು.೨೭ ರಂದು ಕುಮಟಾಕ್ಕೆ ಆಗಮಿಸಲಿರುವ ನಿಖಿಲ್ ಕುಮಾರಸ್ವಾಮಿ

ಜನರೊಂದಿಗೆ ಜನತಾದಳ ಕಾರ್ಯಕ್ರಮ : ಸದಸ್ಯತ್ವ ಅಭಿಯಾನಕ್ಕೆ ಚಾಲನೆ

by News Desk
0 comments

ಕುಮಟಾ : ಪಕ್ಷ ಸಂಘಟನೆ ಹಾಗೂ ಸದಸ್ಯತ್ವ ಅಭಿಯಾನವನ್ನು ಲಕ್ಷ್ಯದಲ್ಲಿ ಇಟ್ಟುಕೊಂಡು, ಪ್ರತೀ ಘಟಕದಲ್ಲಿ ಸದಸ್ಯತ್ವ ಅಭಿಯಾನ ನಡೆಸುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ‘ಜನರೊಂದಿಗೆ ಜನತಾದಳ’ ಅಭಿಯಾನ ಆರಂಭಿಸಿದ್ದು, ಜು. ೨೭ ರ ರವಿವಾರ ಕುಮಟಾಕ್ಕೆ ಅವರು ಆಗಮಿಸಲಿದ್ದಾರೆ. ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳುವ ಹಾಗೂ ವಿಶೇಷ ರೀತಿಯಲ್ಲಿ ಕಾರ್ಯಕ್ರಮ ಸಂಯೋಜನೆಗೊಂಡಿದೆ. ಜೆಡಿಎಸ್ ನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂದರ್ಭದಲ್ಲಿ ಹಾಜರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ, ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸೂರಜ್ ನಾಯ್ಕ ಸೋನಿ ವಿನಂತಿಸಿದರು. ಅವರು ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜನರ ಕಷ್ಟಗಳನ್ನು ಅರಿಯುವ ಹಾಗೂ ಜನರ ಕಷ್ಟಗಳಿಗೆ ಸ್ಪಂದಿಸುವಲ್ಲಿ ಜೆಡಿಎಸ್ ಪಕ್ಷ ಮುಂಚೂಣಿಯಲ್ಲಿ ಸದಾ ಇದೆ. ಜನರ ಜೊತೆಗೆ ಇದ್ದು, ಅವರ ಆಗುಹೋಗುಗಳನ್ನು ತಿಳಿದುಕೊಳ್ಳುವ ಜೊತೆಗೆ ಪಕ್ಷ ಸಂಘಟನೆ ಸದಸ್ಯತ್ವ ಅಭಿಯಾನ ನಡೆಸುವ ನಿಟ್ಟಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಸಂಯೋಜಿಸಲಾಗಿದೆ. ಕುಮಟಾ ಪಟ್ಟಣದ ಪುರಭವನದಲ್ಲಿ ಜು. 27ರಂದು ರವಿವಾರ ಈ ಕಾರ್ಯಕ್ರಮಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡುವರು.

ಪ್ರತಿ ಬೂತ್ ಗಳಲ್ಲಿ ಕನಿಷ್ಠ 10 ಜನ ಸದಸ್ಯರನ್ನು ನೋಂದಾವಣೆ ಮಾಡಿಕೊಳ್ಳುವ ಮಹಾ ಅಭಿಯಾನ ಪ್ರಾರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತಾಗಿಯೂ ಚರ್ಚೆ ನಡೆಯಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ತಾಲೂಕಿಗೆ ಬರಮಾಡಿಕೊಳ್ಳಲು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಭವ್ಯ ಸ್ವಾಗತವನ್ನು ಅವರಿಗೆ ನೀಡಲಿದ್ದೇವೆ. ಈ ಸಂದರ್ಭದಲ್ಲಿ ರಾಜ್ಯ, ಜಿಲ್ಲೆ, ತಾಲೂಕಿನ ಜೆಡಿಎಸ್ ಪ್ರಮುಖರು ಭಾಗವಹಿಸಲಿದ್ದಾರೆ. ಕಾರ್ಯಕರ್ತರ ಮನೆಯಲ್ಲಿ ಅಲ್ಪೋಪಹಾರ, ಬ್ರಹ್ಮಾನಂದ ಸರಸ್ವತಿ ಶ್ರೀಗಳು ಹಾಗೂ ರಾಘವೇಶ್ವರ ಭಾರತೀ ಶ್ರೀಗಳ ಚಾತುರ್ಮಾಸ್ಯದ ಸ್ಥಳಕ್ಕೂ ಭೇಟಿ ನೀಡಿ ಗುರುಗಳ ಆಶೀರ್ವಾದವನ್ನು ಅವರು ಪಡೆಯಲಿದ್ದಾರೆ ಎಂದು ವಿವರಿಸಿದರು.

ಜೆಡಿಎಸ್ ತಾಲೂಕಾ ಅಧ್ಯಕ್ಷ ಸಿ.ಜಿ ಹೆಗಡೆ, ಟಿ.ಟಿ ನಾಯ್ಕ, ಪ್ರಮುಖರಾದ ಉಪೇಂದ್ರ ಪೈ, ದತ್ತ ಪಟಗಾರ, ಇಲಿಯಾಸ್ ಸಾಬ್, ಮಹಾಬಲೇಶ್ವರ ಗೌಡ, ಮೋಹಿನಿ ನಾಯ್ಕ, ಸಚಿನ್ ನಾಯ್ಕ, ಬಲೀಂದ್ರ ಗೌಡ, ಸುಬ್ಬಯ್ಯ ನಾಯ್ಕ, ದೇವು ಹರಿಕಂತ್ರ, ಬಿ.ಎಲ್ ಸೃಜನ್, ಯಶವಂತ ಗೌಡ, ಗುರು ಮಾಸೂರು, ಮಹೇಶ ಹರಿಕಂತ್ರ, ರೋಷನ್ ನಾಯ್ಕ, ವಿ.ಟಿ ಗೌಡ, ಲಕ್ಷ್ಮೀನಾರಾಯಣ ಹೆಗಡೆ ಇತರರು ಇದ್ದರು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".