Home ಜಿಲ್ಲೆಸೇತುವೆಯ ಮೇಲಿಂದ ಕೆಳಕ್ಕೆ ಬಿದ್ದ ಬಸ್

ಸೇತುವೆಯ ಮೇಲಿಂದ ಕೆಳಕ್ಕೆ ಬಿದ್ದ ಬಸ್

ಓರ್ವನ ಸಾವು : 18 ಜನರಿಗೆ ಪೆಟ್ಟು

by News Desk
0 comments

ಅಂಕೋಲಾ : ರಾಷ್ಟ್ರೀಯ ಹೆದ್ದಾರಿ 63 ಅಂಕೋಲಾದ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಿರು ಸೇತುವೆ ಮೇಲಿಂದ ಕೆಳಕ್ಕೆ ಬಿದ್ದ ಘಟನೆ ನಡೆದಿದೆ.

ಅಗಸೂರಿನ ಜಗದೀಶ ಹೊಟೇಲ್ ಬಳಿ ಈ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಯಲ್ಲಾಪುರ ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆ ಬಸ್ ತೆರಳುತಿತ್ತು. ಬೆಳಗಿನ ಜಾವ ಮೂರು ಗಂಟೆಯ ಹೊತ್ತಿಗೆ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು ಸುಮಾರು 18 ಪ್ರಯಾಣಿಕರಿಗೆ ಗಾಯಗಳಾಗಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರು ‌ಆಸ್ಪತ್ರೆಗೆ ರವಾನಿಸಿದ್ದು, ಉಳಿದ ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಗಾಯಾಳುಗಳನ್ನು ಸಾಗಿಸಲು ದಿನಪತ್ರಿಕೆ ಸಾಗಾಟ ಮಾಡುವ ಕಾರು ಚಾಲಕ ಸೈಯದ್ ಜಾಕಿರ್ ಇನಾಮ್ದಾರ್ ಎಂಬುವವರು ಸಹಕರಿಸಿದ್ದರು. ಬಸ್ ನಲ್ಲಿ ಚಿಕ್ಕಚಿಕ್ಕ ಮಕ್ಕಳು, ಬ್ಯಾಂಕ್ ಉದ್ಯೋಗಿ, ಮೆಡಿಕಲ್ ಸ್ಟುಡೆಂಟ್ ಓರ್ವರು, ಇನ್ವೆಸ್ಟಮೆಂಟ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸೇರಿದಂತೆ ಮಹಿಳೆಯರು , ವೃದ್ಧರು ಇದ್ದರು.

ಅಂಕೋಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನ ಮೇಲಕ್ಕೆ ಎತ್ತುವಲ್ಲಿ ಮತ್ತು ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದರು. ಈ ಸಂಬಂಧ ಠಾಣೆಯಲ್ಲಿ ದೂರು‌ ದಾಖಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".