ಕಾರವಾರ : ಭಾರತೀಯ ಹವಾಮಾನ ಇಲಾಖೆಯವರು ಬೆಂಗಳೂರು ಇವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 22-07-2025 ರಿಂದ ದಿನಾಂಕ 23-07-2025 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ಆರೆಂಜ್ ಅಲರ್ಟ್) ನ್ನು ನೀಡಿರುತ್ತಾರೆ. ಅದರಂತೆ ತಹಶೀಲ್ದಾರರ ಮೌಖಿಕ ಕೋರಿಕೆಯಂತೆ ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಅರವರ ಪತ್ರದಂತೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಅಂಗನವಾಡಿಗಳಿಗೆ ದಿನಾಂಕ: 23-07-2025 ರಂದು ಮಾತ್ರ ರಜೆ ಘೋಷಿಸಿದೆ.
ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಅಂಗನವಾಡಿಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಈ ರಜೆ ಘೋಷಣೆ ಮಾಡಲಾಗಿದೆ.
