Home ಮಾಹಿತಿರೆಡ್ ಅಲರ್ಟ ಹಿನ್ನೆಲೆ ಉ.ಕ ಜಿಲ್ಲೆಯ ಹಲ ತಾಲೂಕಿಗೆ ರಜೆ ಘೋಷಣೆ

ರೆಡ್ ಅಲರ್ಟ ಹಿನ್ನೆಲೆ ಉ.ಕ ಜಿಲ್ಲೆಯ ಹಲ ತಾಲೂಕಿಗೆ ರಜೆ ಘೋಷಣೆ

ಅಂಗನವಾಡಿ, ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಆದೇಶ

by News Desk
0 comments

ಕಾರವಾರ : ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಅಧಿಕ ಮಳೆ ಇರುವುದರಿಂದ ಹಾಗೂ ರೆಡ್ ಅಲರ್ಟ ಇರುವುದರಿಂದ ಕರಾವಳಿ ಭಾಗದ ಕಾರವಾರ,ಅಂಕೋಲ,ಕುಮಟಾ,ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ ಕಾಲೇಜು ಹಾಗೂ ಅಂಗನವಾಡಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶನಿವಾರ ಜಿಲ್ಲೆಯ ಕರಾವಾಲಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ. ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ಕರಾವಳಿ ಭಾಗದ ಐದು ತಾಲೂಕುಗಳ ಎಲ್ಲ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಮುಂದುವರಿದ ಮಳೆ ಹಾಗೂ ಹಲವೆಡೆ ಸಂಭವಿಸಿದ ಜಲಾವೃತ ಪರಿಸ್ಥಿತಿಯ ಹಿನ್ನಲೆಯಲ್ಲಿ ಈ ತಾತ್ಕಾಲಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಿಲ್ಲಾಡಳಿತದ ಈ ಕ್ರಮದಿಂದ ವಿದ್ಯಾರ್ಥಿಗಳ ಭದ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಯ್ದುಕೊಳ್ಳುವುದು ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".