Home ಮಾಹಿತಿಮತ್ತೆ ಶಾಲಾ ಕಾಲೇಜುಗಳ ರಜೆ ಮುಂದುವರಿಕೆ

ಮತ್ತೆ ಶಾಲಾ ಕಾಲೇಜುಗಳ ರಜೆ ಮುಂದುವರಿಕೆ

by News Desk
0 comments

ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 18-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರಿಂದ 6 ರ ಮನವಿ/ಕೋರಿಕೆಯಂತೆ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ,ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಕೋರಿರುತ್ತಾರೆ.

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ದಿನಾಂಕ:19-8-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.

ಅದೇಶ: ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ: 19-8-2025 ರಂದು ರಜೆ ಘೋಷಿಸಿ ಆದೇಶಿಸಿದೆ.

ಸದ್ರಿ ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ/ಶಿರಸಿ, ಉಪನಿರ್ದೇಶಕರು ಪದವಿ ಪೂರ್ವ ಕಾಲೇಜು ರವರು ಕಾರ್ಯ ರೂಪಕ್ಕೆ ತರುವುದು ಎಂದು ತಿಳಿಸಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".