ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 19-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ಅರೆಂಜ್ ಅಲರ್ಟ್) ನ್ನು ನೀಡಿರುತ್ತಾರೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ರಜೆ ಘೋಷಿಸುವ ಬಗ್ಗೆ ಆಯಾ ವಿಭಾಗದವರು ಕೋರಿರುತ್ತಾರೆ.

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ: 20-8-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.