Home ಜಿಲ್ಲೆಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಆಗಸ್ಟ್ 28, 2025ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

by News Desk
0 comments

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ಆಗಸ್ಟ್ 28, 2025ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಕ್ಕಳಿಗೆ ಅನಾನುಕೂಲವಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ರಜೆ ಘೋಷಿಸಲಾಗಿದೆ. ಆದ್ದರಿಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".