ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 31ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಆಗಸ್ಟ್ 29ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನ ಗತಿಯಲ್ಲಿದ್ದು, ಪಥದ ಅನಿಶ್ಚಿತತೆ ಮುಂದುವರಿದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಭಾರೀ ಮಳೆ ಆರ್ಭಟ ಇರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿಯೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ ೨೮ರಂದು ಆರೆಂಜ್ ರೆಡ್ ಅಲರ್ಟ ನೀಡಲಾಗಿದೆ. ನಂತರ ಆಗಸ್ಟ್ 31 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ, ಕಲಬುರ್ಗಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ ಆಗಸ್ಟ್ 28-29 ರಂದು ಯೆಲ್ಲೋ ಅಲರ್ಟ್ ನೀಲಾಗಿದೆ.